ಬೆನ್ನು ಹುರಿ ನೋವಿನ ಕಾರಣ ಜೈಲಿನಲ್ಲಿ ಸತ್ಯೇಂದ್ರ ಜೈನ್​ಗೆ ಮಸಾಜ್ ಮಾಡಲು ವೈದ್ಯರೇ ಹೇಳಿದ್ದರು; ವೈರಲ್ ವೀಡಿಯೊಕ್ಕೆ ಆಪ್‌ ಪಕ್ಷದ ನಾಯಕರ ಸಮರ್ಥನೆ

ನವದೆಹಲಿ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ (ಎಎಪಿ) ಅವರ ರಕ್ಷಣೆಗೆ ಮುಂದಾಗಿದೆ. ಸತ್ಯೇಂದ್ರ ಜೈನ್ ವಿರುದ್ಧದ ಆರೋಪಗಳನ್ನು ನಿರಾಕರಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಅವರು, ಸತ್ಯೇಂದ್ರ ಜೈನ್‌ ಅವರಿಗೆ ಪೆಟ್ಟಾಗಿದ್ದಕ್ಕೆ ಚಿಕಿತ್ಸೆ ನೀಡಿದ್ದರ ವೀಡಿಯೊ ಇದಾಗಿದೆ ಎಂದು ಹೇಳಿದ್ದಾರೆ.
ಸತ್ಯೇಂದ್ರ ಜೈನ್ ಅವರನ್ನು ಸಮರ್ಥಿಸಿಕೊಂಡಿರುವ ಮನೀಶ ಸಿಸೋಡಿಯಾ ಬೆನ್ನು ಹುರಿಯ  ತೊಂದರೆ ಕಾರಣ ವೈದ್ಯರು ಫಿಸಿಯೋಥೆರಪಿ ತೆಗೆದುಕೊಳ್ಳಲು ಸಚಿವರಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಅವರ ಚಿಕಿತ್ಸೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಸೋರಿಕೆ ಮಾಡುವ ಮೂಲಕ ಬಿಜೆಪಿ ಪಕ್ಷವು ಮಾತ್ರ ಕ್ರೂರ ಹಾಸ್ಯಗಳನ್ನು ಮಾಡಬಲ್ಲದು… ಅವರ [ಸತ್ಯೇಂದ್ರ ಜೈನ್] ಬೆನ್ನುಮೂಳೆಗೆ ತೊಂದರೆಗೊಳಗಾಗಿದೆ. ಇದು ದಾಖಲೆಯಲ್ಲಿದೆ,” ಎಂದು ಮನೀಶ್ ಸಿಸೋಡಿಯಾ ಶನಿವಾರ ಮಾಧ್ಯಮಗಳಿಗೆ ತಿಳಿಸಿದರು.

ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನಲ್ಲಿ ಕಾಲು ಮಸಾಜ್ ಮಾಡುತ್ತಿರುವ ಸಿಸಿಟಿವಿ ವಿಡಿಯೋ ವೈರಲ್‌ ಆಗಿದೆ. ಭಾರತೀಯ ಜನತಾ ಪಕ್ಷವು (ಬಿಜೆಪಿ) ಸಚಿವರನ್ನು ಜೈಲಿನಿಂದ ಸ್ಥಳಾಂತರಿಸುವಂತೆ ಒತ್ತಾಯಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆಯಾಗಿದೆ.
ಸೆಪ್ಟೆಂಬರ್ 13ರದ್ದು ಎಂದು ಹೇಳಲಾದ ಈ ಸಿಸಿಟಿವಿ ದೃಶ್ಯಾವಳಿಯಲ್ಲಿ ಸಚಿವರು ತಮ್ಮ ಹಾಸಿಗೆಯ ಮೇಲೆ ಮಲಗಿದ್ದಾರೆ ಮತ್ತು ಕೆಲವು ಪೇಪರ್‌ಗಳನ್ನು ಓದುತ್ತಿದ್ದಾರೆ ಮತ್ತು ಅವರ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬರು ಅವರ ಪಾದವನ್ನು ಮಸಾಜ್ ಮಾಡುತ್ತಿರುವುದು ಕಂಡುಬರುತ್ತದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಹಂಚಿಕೊಂಡಿರುವ ಮತ್ತೊಂದು ವೀಡಿಯೊದಲ್ಲಿ, ವ್ಯಕ್ತಿಯೊಬ್ಬರು ಸತ್ಯೇಂದ್ರ ಜೈನ್ ಅವರ ಕಾಲುಗಳಿಗೆ ಮತ್ತು ಹಿಂಭಾಗಕ್ಕೆ ಮಸಾಜ್ ಮಾಡುತ್ತಿರುವುದು ಕಂಡುಬಂದಿದೆ.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

ಹಾಗಾದರೆ ಜೈಲಿನಲ್ಲಿ ಸತ್ಯೇಂದ್ರ ಜೈನ್ ಪೂರ್ಣ ವಿವಿಐಪಿ ಮಜಾ ಪಡೆಯುತ್ತಿದ್ದಾರಾ? ತಿಹಾರ್ ಜೈಲಿನೊಳಗೆ ಮಸಾಜ್? ಎಎಪಿ ಸರ್ಕಾರ ನಡೆಸುತ್ತಿರುವ ಜೈಲಿನಲ್ಲಿ ನಿಯಮಗಳ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿ ಶೆಹಜಾದ್ ಪೂನವಾಲಾ ಟ್ವೀಟ್ ಮಾಡಿದ್ದಾರೆ. ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಮತ್ತು ಕೇಜ್ರಿವಾಲ್‌ಗೆ ಮಸಾಜ್ ಧನ್ಯವಾದಗಳನ್ನು ಎಂದು ಟೀಕಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ದೆಹಲಿ ಸಚಿವ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದ 10 ದಿನಗಳ ನಂತರ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊಗಳು ಕಾಣಿಸಿಕೊಂಡವು. ಇದಕ್ಕೊ ಮೊದಲು ಜಾರಿ ನಿರ್ದೇಶನಾಲಯವು ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್‌ ನೀಡಿದ್ದರ ಬಗ್ಗೆ ದೆಹಲಿ ನ್ಯಾಯಾಲಯದಲ್ಲಿ ಆರೋಪಿಸಿತ್ತು ಹಾಗೂ ಇದಕ್ಕೆ ಸಂಬಂಧಪಟ್ಟಿದ್ದೆಂದು ಹೇಳಲಾದ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement