ಮಂಗಳೂರು: ರಿಕ್ಷಾದಲ್ಲಿ ನಿಗೂಢ ಬೆಂಕಿ ಅವಘಡ-ಇಬ್ಬರಿಗೆ ಗಾಯ

posted in: ರಾಜ್ಯ | 0

ಮಂಗಳೂರು: ನಗರದ ಕಂಕನಾಡಿ ಠಾಣಾ ವ್ಯಾಪ್ತಿಯ ನಾಗುರಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟದ ರೀತಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಆಟೋದಲ್ಲಿ ನಿಗೂಢ ರೀತಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಫೋಟ ಸಂಭವಿಸಿದೆಯೇ ಎಂಬುದು ದೃಢಪಡಬೇಕಿದೆ. ಘಟನೆಯಲ್ಲಿ ಪ್ರಯಾಣಿಕ ಮತ್ತು ಆಟೋ ರಿಕ್ಷಾ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆಟೋ ಒಳಭಾಗ ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.
ಆಟೋ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ಬಳಿಯ ಬಸ್ ಸ್ಟಾಪ್ ಬಳಿ ಬಂದಾಗ ಏಕಾಏಕಿ ಸ್ಫೋಟದ ರೀತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ಪೊಲೀಸ್ ಅಧಿಕಾರಿಗಳು, ವಿಧಿವಿಜ್ಞಾನ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಬಳಿಕ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್, ನಾಗುರಿಯಿಂದ ಪಂಪ್ ವೆಲ್ ಕಡೆ ತೆರಳುತ್ತಿದ್ದ ಆಟೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಾಗುರಿಯಿಂದ ಹತ್ತಿದ ಪ್ರಯಾಣಿಕನ ಕೈಯಲ್ಲಿದ್ದ ಪ್ಲ್ಯಾಸ್ಟಿಕ್ ಬ್ಯಾಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತಗುಲಿದ ಪರಿಣಾಮ ಅಟೋ ಒಳಭಾಗ ಸುಟ್ಟು ಹೋಗಿದೆ ಎಂದು ಹೇಳಿದ್ದಾರೆ.
ಕಂಕನಾಡಿ ಪೊಲೀಸ್ ಠಾಣೆಯ ಬಳಿ ಸಂಜೆ 5.15ರ ಸುಮಾರಿಗೆ ನಾಗುರಿ ಎಂಬಲ್ಲಿಂದ ಪಂಪ್ ವೆಲ್ ಕಡೆ ಅಟೋ ಸಂಚರಿಸುತ್ತಿದ್ದಾಗ ಪ್ರಾರಂಭದಲ್ಲಿ ಅಟೋದಲ್ಲಿ ಬೆಂಕಿ‌ ಕಾಣಿಸಿಕೊಂಡಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲಘಟನೆ ಬಗ್ಗೆ ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಈ ಬಗ್ಗೆ ವದಂತಿಗಳನ್ನು ಹಬ್ಬಿಸುವುದು ಬೇಡ. ಈ ಬಗ್ಗೆ ಏನಾದರೂ ಮಾಹಿತಿ ಇದ್ದರೂ ನಾವು ನೀಡುತ್ತೇವೆ. ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಚುನಾವಣೆ ಸನಿಹದಲ್ಲೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರು ರಾಜೀನಾಮೆ : ಮುಂದಿನ ನಡೆ..?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement