ಮತದಾರರ ಮಾಹಿತಿ ಕಳ್ಳತನದ ಆರೋಪ: ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು: ಮತದಾರರ ಗುರುತಿನಚೀಟಿ ಪರಿಷ್ಕರಣೆಯಲ್ಲಿ ಹೆಸರಿನಲ್ಲಿ ನಡೆದಿರವ ಮತದಾರರ ಮಾಹಿತಿ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ, ದಿನೇಶ ಗುಂಡೂರಾವ್ ಮೊದಲಾದವರನ್ನೊಳಗೊಂಡ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ ಮೀನಾ ಅವರಿಗೆ ದೂರು ಸಲ್ಲಿಸಿದರು.

ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಗೌಪ್ಯ ಮಾಹಿತಿಯನ್ನು ಕಲೆ ಹಾಕಲಾಗಿದೆ. ಕೆಲವು ಕಡೆ ಉದ್ದೇಶಪೂರ್ವಕವಾಗಿ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ನಮ್ಮ ಬಳಿ ಇದ್ದ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ನೀಡಿದ್ದೇವೆ. ಇದರ ಹಿಂದೆ ಖಾಸಗಿ ಸಂಸ್ಥೆ, ಬಿಬಿಎಂಪಿ ಮತ್ತು ಸರ್ಕಾರದ ಕೆಲವು ಸಚಿವರು ಶಾಮೀಲಾಗಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ನಿಯೋಗವು ಒತ್ತಾಯಿಸಿತು.
ನಂತರ ಮಾಧ್ಯದವರ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ನಿಯಮಗಳ ಪ್ರಕಾರ ಮತದಾರರ ಗೌಪ್ಯ ಮಾಹಿತಿಯನ್ನು ಕಲೆ ಹಾಕುವುದು ಅಪರಾಧ. ಚಿಲುಮೆ ಸಂಸ್ಥೆ ಮತ್ತು ಸಚಿವರೊಬ್ಬರಿಗೆ ಸೇರಿದ ಹೊಂಬಾಳೆ ಸಂಸ್ಥೆಗೆ ಒಂದಕ್ಕೊಂದು ಸಂಬಂಧವಿದೆ. ಇದರಲ್ಲಿ ಸಚಿವರು ಮತ್ತು ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಘುವಾಗಿ ತೆಗೆದುಕೊಂಡಂತೆ ಕಾಣುತ್ತಿದೆ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement