ಸವದತ್ತಿ: ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ತಾಯಿ-ಇಬ್ಬರು ಮಕ್ಕಳ ಶವ ಪತ್ತೆ, ಆತ್ಮಹತ್ಯೆ ಶಂಕೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ‌ ಚುಂಚನೂರು ಗ್ರಾಮದ ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಎಂದು ಗುರುತಿಸಲಾಗಿದೆ.
ಸವದತ್ತಿ ಪೊಲೀಸ್‌ ಠಾಣಾ ವ್ಯಾಪ್ತಿಯ ವಟಾಳ ಗ್ರಾಮದ ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಮೂವರ ಶವ ಪತ್ತೆಯಾಗಿದ್ದು, ತನುಜಾ ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆಯಿಂದ ಇನ್ನಷ್ಟು ವಿವರ ತಿಳಿದುಬರಬೇಕಿದೆ.
ಕಳೆದ ರಾತ್ರಿ ಮೂರು ಜನರ ಶವಗಳನ್ನ ಪೊಲೀಸರು ಹೊರ ತೆಗೆದಿದ್ದಾರೆ. ಸವದತ್ತಿ ತಾಲೂಕು ಆಸ್ಪತ್ರೆಗೆ ಶವಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

4 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement