ಆನೆ ದಾಳಿಗೆ ಮಹಿಳೆ ಸಾವು

posted in: ರಾಜ್ಯ | 0

ಚಿಕ್ಕಮಗಳೂರು: ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಹುಲ್ಲೆಮನೆ ಗ್ರಾಮದ ಶೋಭಾ (45) ಎಂದು ಗುರುತಿಸಲಾಗಿದೆ. ಶೋಭಾ ಭಾನುವಾರ ತನ್ನ ಪತಿ ಸತೀಶ್‍ಗೌಡ ಅವರೊಂದಿಗೆ ಅಡಕೆ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದರು. ಇವರ ಜೊತೆಗೆ ಗ್ರಾಮದ ವಿಜಯ ಎಂಬುವರು ಕೂಡ ಅಲ್ಲಿಯೇ ಹುಲ್ಲು ಕೊಯ್ಯುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಕಾಡಾನೆ ಪ್ರತ್ಯಕ್ಷವಾಗಿದೆ. ನಾಯಿ ಕಾಡಾನೆ ಕಂಡು ಕೂಗಿದ ನಂತರ ವಿಜಯ ಹಾಗೂ ಸತೀಶ್‍ಗೌಡ ಓಡಿ ತಪ್ಪಿಸಿಕೊಂಡಿದ್ದಾರೆ.
ಆದರೆ ಶೋಭಾ ರಸ್ತೆ ದಾಟುವ ಸಂದರ್ಭದಲ್ಲಿ ಬೆನ್ನಟ್ಟಿದ ಆನೆ ಸೊಂಡಿಲಿನಿಂದ ಎತ್ತಿ ಒಗೆದು ತುಳಿದಿದೆ. ತುಳಿದ ರಭಸಕ್ಕೆ ಅವರು ಮೃತಪಟ್ಟಿದ್ದಾರೆ. ನಂತರ ಕಾಡಾನೆ ಅಲ್ಲಿಂದ ಹೋಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಕಾಂತಾರ: ಹೊಂಬಾಳೆ ಫಿಲ್ಮ್ಸ್‌ ವಿರುದ್ಧದ ಎರಡನೇ ಮೊಕದ್ದಮೆ ಹಿಂದಿರುಗಿಸಿದ ಕೇರಳ ಕೋರ್ಟ್; ಈಗ "ವರಾಹರೂಪಂ" ಹಾಡಿನ ಬಳಕೆ ವಿರುದ್ಧ ಯಾವುದೇ ಆದೇಶವಿಲ್ಲ

3 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement