ಮಂಗಳೂರು : ಆಟೋದಲ್ಲಿ ನಿಗೂಢ ಸ್ಪೋಟ ಪ್ರಕರಣ…ಎಡಿಜಿಪಿ ಹೇಳಿದ್ದೇನೆಂದರೆ…

ಮಂಗಳೂರು: ಕಂಕನಾಡಿ ಸಮೀಪ ಆಟೋರಿಕ್ಷಾದಲ್ಲಿ ಸಂಭವಿಸಿದ ನಿಗೂಢ ಸ್ಪೋಟಕ್ಕೆ ಸಂಬಂಧಿಸಿದಂತೆ, ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬೇರೆಡೆ ಹೋಗಿ ಬಾಂಬ್​ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದ. ಆದರೆ ಆಕಸ್ಮಿಕವಾಗಿ ಆಟೋದಲ್ಲಿ ಅದು ಬ್ಲಾಸ್ಟ್​​ ಆಗಿದೆ ಎಂದು ಎಡಿಜಿಪಿ ಅಲೋಕ​​ಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಇರುವುದು ಯಾರು ಎಂಬ ಮಾಹಿತಿ ಸಿಕ್ಕಿದೆ. ಶಂಕಿತನ ಸಂಪರ್ಕದ ಬಗ್ಗೆ ಎಲ್ಲಾ ಸ್ಥಳಕ್ಕೂ ನಮ್ಮ ತಂಡ ಹೋಗಿದೆ. ಶಂಕಿತನ ಗುರುತು ಖಚಿತಪಡಿಸಲು ಸಂಬಂಧಿಕರನ್ನು ಕರೆದಿದ್ದೇವೆ. ಸಂಬಂಧಿಕರು ಗುರುತಿಸಿದ ನಂತರ ಆರೋಪಿ ಯಾರು ಎಂಬ ಬಗ್ಗೆ ಖಚಿತವಾಗಿ ಹೇಳುತ್ತೇವೆ ಎಂದರು.
ಮಂಗಳೂರಲ್ಲಿ ಶನಿವಾರ ನಡೆದ ಆಟೋದಲ್ಲಿನ ಸ್ಫೋಟ ಪ್ರಕರಣದ ಕುರಿತು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲಿ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಎನ್‌ಐಎ ತಂಡ ಆಗಮನ
ಘಟನೆ ನಡೆದ ಸ್ಥಳಕ್ಕೆ ಹಿರಿಯ ಎನ್‌ಐಐ (NIA) ಅಧಿಕಾರಿಗಳ ತಂಡ ಆಗಮಿಸಿ ತೀವ್ರ ಶೋಧ ಕಾರ್ಯ ನಡೆಸುತ್ತಿದೆ. ಸ್ಫೋಟ ಪ್ರಕರಣದಲ್ಲಿ ಭಯೋತ್ಪಾದನೆ ಕೃತ್ಯದ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ಶಂಕಿತ ವ್ಯಕ್ತಿಗೆ ಗಂಭೀರ ಗಾಯ
ಸ್ಫೊಟ ಪ್ರಕರಣದಲ್ಲಿ ಶಂಕಿತ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ ತಿಳಿಸಿದ್ದಾರೆ. ಆತನ ಸದ್ಯಕ್ಕೆ ಮಾತನಾಡುವ ಸ್ಥಿತಿಯಲ್ಲಿಲ್ಲ. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ, ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement