ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ: 2013ರಿಂದ ತನಿಖೆಗೆ ಆದೇಶ, ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ-ಸಿಎಂ ಬೊಮ್ಮಾಯಿ

ಬೆಂಗಳೂರು : 2013ರಿಂದಲೂ ಚಿಲುಮೆ ಸಂಸ್ಥೆಗೆ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಇತರ ಜವಾಬ್ದಾರಿಗಳನ್ನು ವಹಿಸಿದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದೇನೆ. ತನಿಖೆಯ ಮೂಲಕ ಎಲ್ಲ ಸತ್ಯಗಳು ಹೊರಬರಲಿದೆ. ನಿರಾಧಾರ ಆರೋಪ ಮಾಡುತ್ತಿರುವ ಕಾಂಗ್ರೆಸ್ನ ಈ ಪ್ರಯತ್ನ, ಮುಂದಿನ ದಿನಗಳಲ್ಲಿ ಅವರಿಗೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ಕಾವೇರಿ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತದಾರರ ಪರಿಷ್ಕರಣೆಯ ಕಾರ್ಯದಲ್ಲಿ ಮತದಾರರ ಹೆಸರನ್ನು ಸೇರಿಸುವುದು ಹಾಗೂ ಕೈಬಿಡುವುದು ಚುನಾವಣಾ ಆಯೋಗದ ಕೆಲಸವೇ ಹೊರತು ಸರ್ಕಾರದ್ದಲ್ಲ. ಇದನ್ನು ಚುನಾವಣಾ ಆಯೋಗವೇ ಮಾಡುತ್ತಿದೆ ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಎಲ್ಲವುಗಳ ಬಗ್ಗೆಯೂ ಸ್ಪಷ್ಟತೆ ಸಿಗಲಿ ಎಂಬ ಉದ್ದೇಶದಿಂದ 2013ರಿಂದ ತನಿಖೆಗೆ ಆದೇಶ ನೀಡಲಾಗಿದೆ. ಯಾವ ಉದ್ದೇಶದಿಂದ ಚಿಲುಮೆ ಸಂಸ್ಥೆಗೆ ಆದೇಶ ನೀಡಿದ್ದಾರೆಂಬ ಸತ್ಯಾಸತ್ಯತೆ ಜನರಿಗೆ ಗೊತ್ತಾಗಬೇಕು ಎಂದು ಹೇಳಿದರು. ನಮ್ಮ ಬಿಜೆಪಿ ಸರ್ಕಾರದ ಆದೇಶದಲ್ಲಿ ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮಾತ್ರ ಆದೇಶ ನೀಡಲಾಗಿದ್ದು, ಚಿಲುಮೆ ಸಂಸ್ಥೆಗೆ ಯಾವುದೇ ರಾಜಕೀಯ ಪಕ್ಷದ ಜೊತೆ ಸಂಬಂಧವಿರಬಾರದು ಎಂಬ ಷರತ್ತನ್ನೂ ವಿಧಿಸಲಾಗಿದೆ. ಆದರೆ ಸಿದ್ದರಾಮಯ್ಯ ಸರ್ಕಾರ ನೀಡಿರುವ ಆದೇಶದಲ್ಲಿ ಚುನಾವಣಾ ಆಯೋಗ ನಿರ್ವಹಿಸಬೇಕಾದ ಮತ ಪರಿಷ್ಕರಣೆಯ ಕಾರ್ಯವನ್ನೇ ಸಂಸ್ಥೆಗೆ ನೀಡಿ ಆದೇಶ ನೀಡಲಾಗಿದೆ. ಚುನಾವಣಾ ಆಯೋಗ ನಿರ್ವಹಿಸಬೇಕಾದ ಕಾರ್ಯವನ್ನು ಖಾಸಗಿ ಸಂಸ್ಥೆಗೆ ವಹಿಸಿರುವುದು ಅಕ್ಷಮ್ಯ ಅಪರಾಧ. ಹಿಂದಿನ ಸಿದ್ಧರಾಮಯ್ಯ ಸರ್ಕಾರದ ಅವರ ಅವಧಿಯಲ್ಲಿ ತಹಶೀಲ್ದಾರ್‌ ಅವರಿಗೆ ಬಿಎಲ್‌ಓಗಳ ನೇಮಕ ಮಾಡುವ ಆದೇಶವನ್ನೂ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಹದ್ದುಮೀರಿ ಅಧಿಕಾರದ ದುರುಪಯೋಗ ಮಾಡಿಕೊಂಡಿದೆ. ಈ ಬಗ್ಗೆ ತನಿಖೆಯಲ್ಲಿ ಎಲ್ಲವೂ ಹೊರಬರಲಿದೆ ಎಂದು ಹೇಳಿದರು.

ಇಂದಿನ ಪ್ರಮುಖ ಸುದ್ದಿ :-   ಪಾಲಿಗ್ರಾಫ್ ಪರೀಕ್ಷೆಯಲ್ಲಿ ಶ್ರದ್ಧಾಳನ್ನು ಕೊಂದಿದ್ದು ಒಪ್ಪಿಕೊಂಡ ಅಫ್ತಾಬ್ ಪೂನಾವಾಲಾ, ಆದ್ರೆ ಯಾವುದೇ ಪಶ್ಚಾತ್ತಾಪವಿಲ್ಲ: ವರದಿ

ಮತದಾರರ ವಿವರ ಪಡೆಯಲು ಏಜೆನ್ಸಿಯಾಗಿ ಸಚಿವರು ಬಳಸಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ರಾಜಕೀಯ ಪಕ್ಷಗಳೂ ಬೇರೆಬೇರೆ ಸಂಸ್ಥೆಗಳನ್ನು ಏಜೆನ್ಸಿಯಾಗಿ ಬಳಸಿಕೊಳ್ಳುತ್ತಾರೆ. ರಾಜಕೀಯ ಪಕ್ಷಗಳು ಸಮೀಕ್ಷೆಯನ್ನೂ ಮಾಡಿಸುತ್ತವೆ. ಇಲ್ಲಿ ಸರ್ಕಾರ ಯಾವ ರೀತಿಯ ಆದೇಶ ನೀಡಿದೆ ಎಂಬುದು ಮುಖ್ಯವಾಗುತ್ತದೆ. ನಮ್ಮ ಸರ್ಕಾರದ ಆದೇಶದಲ್ಲಿ ಕೇವಲ ಮತದಾನ ಜಾಗೃತಿ ಮಾಡಬೇಕು ಹಾಗೂ ರಾಜಕೀಯ ಪಕ್ಷಗಳೊಂದಿಗೆ ಸಂಬಂಧವಿರಬಾರದು ಎಂಬ ಷರತ್ತು ವಿಧಿಸಲಾಗಿದೆ. ಅವರ ಆದೇಶದಲ್ಲಿ ಈ ಷರತ್ತನ್ನು ವಿಧಿಸಿಯೇ ಇಲ್ಲ ಮತ್ತು ಬಿಎಲ್ಓ ನೇಮಕಾತಿಗೂ ಅನುಮತಿ ಕಾನೂನುಬಾಹಿರವಾಗಿ ನೀಡಿದ್ದಾರೆ ಈ ಮೊದಲು ಕೇವಲ 2022 ಆದೇಶದ ಬಗ್ಗೆ ತನಿಖೆ ಮಾಡಿಸಲು ಸೂಚಿಸಲಾಗಿತ್ತು. ಆದರೆ ಈಗ ಸಮಗ್ರವಾಗಿ ತನಿಖೆಯಾಗಲು 2013 ರಿಂದ ತನಿಖೆ ಮಾಡಿಸಲು ಸೂಚಿಸಲಾಗಿದ್ದು, ಎಲ್ಲ ಸತ್ಯಗಳೂ ಹೊರಬರಲಿದೆ ಎಂದು ಹೇಳಿದರು.

ಇಂದಿನ ಪ್ರಮುಖ ಸುದ್ದಿ :-   ಎಲ್‌ಎಸಿ ಬಳಿ ಭಾರತ-ಅಮೆರಿಕ ಮಿಲಿಟರಿ ಸಮರಾಭ್ಯಾಸಕ್ಕೆ ಚೀನಾ ವಿರೋಧ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement