ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್‌ 22ರಿಂದ ಮತ್ತೆ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ಉಂಟಾಗಿರುವ ವಾಯುಭಾರ ಕುಸಿತದಿಂದ ನವೆಂಬರ್‌ 22ರಿಂದ ರಾಜ್ಯದಲ್ಲಿ ಮತ್ತೆ ಮಳೆ ಬೀಳುವ ಸಾಧ್ಯತೆ ಇದೆ.
ಉತ್ತರ ಕನ್ನಡ,ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಬೆಳಗಾವಿ, ವಿಜಯಪುರ ಹಾಗೂ ಹಾವೇರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನವೆಂಬರ್‌ 22ರಿಂದ ಮುಂದಿನ ಮೂರು ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮೂನ್ಸೂಚನೆ ನೀಡಲಾಗಿದೆ.
ದಕ್ಷಿಣ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಭಾಗದ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರದಲ್ಲಿ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಲಾಗಿದೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ವಂಚನೆ ಪ್ರಕರಣ: ಆರೋಪಿ ಚೈತ್ರಾ ಹೆಸರಿನೊಂದಿಗೆ ʼಕುಂದಾಪುರʼ ಬಳಸದಂತೆ ಕೋರ್ಟ್‌ ನಿರ್ಬಂಧ

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement