ಮಂಗಳೂರಿನ ಆಟೋರಿಕ್ಷಾ ಸ್ಫೋಟ: ಶಂಕಿತ ಶಾರಿಕ್ ಮನೆ ಸೇರಿ ಕೆಲವೆಡೆ ಪೊಲೀಸರ ದಾಳಿ

posted in: ರಾಜ್ಯ | 0

ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡ ಪ್ರಕರಣದ ಹಿನ್ನೆಲೆಯಲ್ಲಿ, ಪ್ರಕರಣದ ಶಂಕಿತ ಆರೋಪಿಗಳ ಸಂಬಂಧ ಶಿವಮೊಗ್ಗ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಪೊಲೀಸರು ದಾಳಿ ನಡೆಸಲು ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ತೀರ್ಥಹಳ್ಳಿಯಲ್ಲಿ ಈವರೆಗೆ ನಾಲ್ಕು ಮನೆಗಳನ್ನು ಪೊಲೀಸರು ಟಾರ್ಗೆಟ್ ಮಾಡಿದ್ದಾರೆ. ಸೆಪ್ಟೆಂಬರ್‌ನಲ್ಲಿ, ಮಾಜ್ ಮತ್ತು ಯಾಸಿನ್ ಅವರನ್ನು ಬಂಧಿಸಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಯಿತು. ಮಂಗಳೂರು ಆಟೋ ಸ್ಫೋಟದ ಶಂಕಿತ ಉಗ್ರ ಶಾರಿಕ್ ಎಂಬಾತ ತಮಗೆ ತರಬೇತಿ ನೀಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈಗ ಮಾಜ್, ಯಾಸಿನ್ ಮತ್ತು ಶಾರಿಕ್ ಸಂಬಂಧಿಕರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರಿಕ್ ಮನೆ ಮೇಲೆ ಸೋಮವಾರ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ. ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ವರದಿಗಳೋಉ ತಿಳಿಸಿವೆ.
ಮಂಗಳೂರಿನಲ್ಲಿ ಶನಿವಾರ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟವಾಗಿದ್ದು, ಚಾಲಕ ಮತ್ತು ಪ್ರಯಾಣಿಕನೊಬ್ಬನಿಗೆ ಸುಟ್ಟ ಗಾಯಗಳಾಗಿವೆ.
ನಕಲಿ ಗುರುತಿನ ಚೀಟಿ ಹೊಂದಿದ್ದ ಪ್ರಯಾಣಿಕನೇ ಈಗ ಪ್ರಮುಖ ಶಂಕಿತನಾಗಿದ್ದು, ಈತ ಮಂಗಳೂರು ರೈಲ್ವೆ ಜಂಕ್ಷನ್‌ನಿಂದ ಬರುತ್ತಿದ್ದ ಆಟೋರಿಕ್ಷಾವನ್ನು ನಾಗೂರಿನಲ್ಲಿ ಹತ್ತಿದ್ದ. ಸ್ಫೋಟದ ನಂತರ ಆಟೋರಿಕ್ಷಾದಿಂದ ಕುಕ್ಕರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಸ್ಫೋಟದ ನಂತರ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ಮಾರುಕಟ್ಟೆಗಳು, ಬಸ್ ನಿಲ್ದಾಣಗಳು ಮತ್ತು ಪ್ರವಾಸಿ ತಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಆಟೋರಿಕ್ಷಾ ಪ್ರಯಾಣಿಕ. ಆತನನ್ನು ಮೊಹಮ್ಮದ್ ಶಾರಿಕ್ ಎಂದು ಗುರುತಿಸಲಾಗಿದೆ. ಆರೋಪಿ ಮೇಲೆ ಈ ಹಿಂದೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಯೋತ್ಪಾದನೆ ಪ್ರಕರಣದಲ್ಲಿ ಈತ ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಹಿಂದುತ್ವದ ಬಗ್ಗೆ ಪೋಸ್ಟ್; ನಟ ಚೇತನ್ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement