ಚಿಕ್ಕಮಗಳೂರು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಸರ್ಕಾರದ ಆದೇಶ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಯಿಂದ ಎರಡು ತಿಂಗಳ ಅಂತರದಲ್ಲಿ ಮೂವರು ಸಾವಿಗೀಡಾದ ಬೆನ್ನಲ್ಲೇ ರಾಜ್ಯ ಸರ್ಕಾರ ತೊಂದರೆ ಕೊಡುತ್ತಿರುವ ಮೂರು ಆನೆಗಳನ್ನು ಸೆರೆ ಹಿಡಿಯಲು ಆದೇಶ ಮಾಡಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳು ರೈತರ ಜಮೀನಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿರುವುದಲ್ಲದೆ, ಹಾಗಿಂದಾಗೆ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ. ಸೆಪ್ಟೆಂಬರ್ ತಿಂಗಳಿಂದ ಈಚೆಗೆ ಮೂವರು ಕಾಡಾನೆಗಳಿಂದ ಸಾವಿಗೀಡಾಗಿದ್ದಾರೆ. ಅಲ್ಲದೆ ಆನೆಗಳು ಜನರ ಆಸ್ತಿ ಪಾಸ್ತಿ, ಬೆಳೆಗಳನ್ನು ನಾಶಪಡಿಸುತ್ತಿವೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಗುರುತಿಸಿ ಸೆರೆಹಿಡಿಯುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲನ ಇಲಾಖೆ ಚಿಕ್ಕಮಗಳೂರು ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದೆ.

ಭಾನುವಾರ ಹುಲ್ಲು ಕೊಯ್ಯಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರನ್ನು ಕಾಡಾನೆ ದಾಳಿ ಮಾಡಿ ಕೊಂದಿತ್ತು. ಈ ಘಟನೆ ಬೆನ್ನಲ್ಲೇ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಬಂದ ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು.
ಆನೆಗಳನ್ನು ಹಿಡಿಯಬೇಕು ಎಂದು ಒತ್ತಾಯಿಸಿ ಈಗಾಗಲೆ ಸಾರ್ವಜನಿಕರು ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆಸಿದ್ದಾರೆ. ಹೀಗಾಗಿ ಸಾರ್ವಜನಿಕರ ಉಪಟಳ ನೀಡುತ್ತಿರುವ ಮೂರು ಕಾಡಾನೆಗಳನ್ನು ಗುರುತಿಸಿ, ಸೆರೆ ಹಿಡಿದು ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕೆಂದು ಅರಣ್ಯಾಧಿಕಾರಿಗಳು ಮನವಿ ಸಲ್ಲಿಸಿದ್ದು, ಇದಕ್ಕೆ ಈಗ ಸರ್ಕಾರ ವನ್ಯಜೀವಿ ಕಾಯ್ದೆ 1972ರ ಸೆಕ್ಷನ್ 11ರ ಅನ್ವಯ ಅನುಮತಿ ನೀಡಿದೆ . ಮೂರು ಆನೆಗಳನ್ನು ಸೆರೆ ಹಿಡಿದು, ರಕ್ಷಿತಾ ಅರಣ್ಯ ಪ್ರದೇಶ ಅಥವಾ ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಸೂಚಿಸಿದೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement