ಮತದಾರರ ಮಾಹಿತಿ ಕಳುವು ಪ್ರಕರಣ : ಚಿಲುಮೆ ಮುಖ್ಯಸ್ಥ ಅರೆಸ್ಟ್, ಪೊಲೀಸರಿಂದ ತೀವ್ರ ವಿಚಾರಣೆ

ಬೆಂಗಳೂರು: ಮತದಾರರ ಮಾಹಿತಿ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಸಂಸ್ಥಾಪಕರಾದ ರವಿಕುಮಾರ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಈಗಾಗಲೇ ನಾಲ್ವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಅದರಲ್ಲಿ ರವಿಕುಮಾರ ಅವರ ಸಹೋದರ ಎಂದು ಹೇಳಲಾದ ಕೆಂಪೃ ಗೌಡ ಸಹ ಸೇರಿದ್ದಾರೆ. ಈಗ ಪ್ರಮುಖ ಆರೋಪಿ ರವಿಕುಮಾರ ಅವರನ್ನು ಬಂಧಿಸುವಲ್ಲಿ ಹಲಸೂರು ಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಡಿಜಿಟಲ್ ಸಮೀಕ್ಷಾ ಆ್ಯಪ್ ಡೆವಲಪ್ ಮಾಡಿದ್ದ ಸಂಜೀವ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಂತರ ಸಂಸ್ಥಾಪಕ ರವಿಕುಮಾರ ಅವರನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ.
ಮತದಾರರ ಮಾಹಿತಿ ಕಳುವು ಹಗರಣದಲ್ಲಿ ಚಿಲುಮೆ ಸಂಸ್ಥೆ ಹೆಸರು ಮುಖ್ಯವಾಗಿ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರು ಸಂಸ್ಥೆಯ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ಬಗ್ಗೆ ಸುಳಿವು ಪಡೆದಿದ್ದ ರವಿಕುಮಾರ ತಲೆಮರೆಸಿಕೊಂಡಿದ್ದರು. ವಕೀಲರ ಭೇಟಿಗೆ ಬಂದಿದ್ದಾಗ ಲಾಲ್‌ಬಾಗ್‌ ಬಳಿ ಪ್ರಮುಖ ಆರೋಪಿ ರವಿಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಈವರೆಗೆ ಐವರನ್ನು ಬಂಧಿಸಲಾಗಿದೆ. ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್, ಸಹೋದರ, ಸಂಸ್ಥೆಯ ಮೇಲ್ವಿಚಾರಕ ಕೆಂಪೇಗೌಡ. ಚಿಲುಮೆ ಸಂಸ್ಥೆಯ ಸಿಬ್ಬಂದಿಯಾದ ಧರ್ಮೇಶ್, ರೇಣುಕಾ ಪ್ರಸಾದ್ ಹಾಗೂ ಇ-ಪ್ರಕ್ಯೂರ್ಮೆಂಟ್ ಮೇಲ್ವಿಚಾರಕ ಪ್ರಜ್ವಲ್‌ ಬಂಧಿತ ಆರೋಪಿಗಳು.
ಡಿಜಿಟಲ್ ಸಮೀಕ್ಷಾ ಆ್ಯಪ್ ಶೋಧಿಸುವ ಕೆಲಸಕ್ಕೆ ಪೊಲೀಸರು ಮುಂದಾಗಿದ್ದಾರೆ. ಜೊತೆಗೆ ಪೊಲೀಸರು ಹಲವೆಡೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement