ನಾಡ ದೇವಿಯ ಭಾವಚಿತ್ರ ಗೊಂದಲಕ್ಕೆ ತೆರೆ: ಸಮಿತಿ ಶಿಫಾರಸ್ಸಿಗೆ ಶೀಘ್ರವೇ ಅಧಿಕೃತ ಮುದ್ರೆ

posted in: ರಾಜ್ಯ | 0

ಬೆಂಗಳೂರು: ನಾಡದೇವಿಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಜಾರಿಗೆ ತರುವಂತೆ ಸಮಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ. ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ಈ ಶಿಫಾರಸು ಮಾಡಿದೆ. ಈ ಶಿಫಾರಸಿಗೆ ಶೀಘ್ರದಲ್ಲೇ ಅಧಿಕೃತ ಮುದ್ರೆ ಬೀಳಲಿದೆ.
ಬೆಂಗಳೂರು ವಿಶ್ವ ವಿದ್ಯಾಲಯದ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಇದೇ ಆಗಿರುತ್ತದೆ ಎಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ ತಿಳಿಸಿದ್ದಾರೆ.
ಹಲವಾರು ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಕರ್ನಾಟಕ ರಾಜ್ಯದ ನಾಡದೇವತೆಯ ಭಾವಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವತೆಗಳ ಚಿತ್ರಗಳನ್ನು ಬಳಸಲಾಗುತ್ತಿದೆ. ಈ ನಿಟ್ಟಿನಲ್ಲಿ ಒಂದು ನಿರ್ದಿಷ್ಟವಾದ ಚಿತ್ರಾಕೃತಿಯ ಕೊರತೆಯಿರುವ ಹಿನ್ನೆಲೆಯಲ್ಲಿ ಸರ್ಕಾರವು ಒಂದು ನಿರ್ದಿಷ್ಟವಾದ ಚಿತ್ರವನ್ನು ಆಯ್ಕೆ ಮಾಡಲು ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು.
ಕನ್ನಡ ನಾಡಿನ ನಾಡದೇವತೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಿಕೊಂಡು ಸಮಿತಿ ಸೂಚಿಸಿರುವಂತೆ ಕಲಾವಿದರಾದ ಸೋಮಶೇಖರ ಕೆ ಅವರಿಗೆ ಚಿತ್ರ ಸಿದ್ಧಪಡಿಸಿ ಸಲ್ಲಿಸಲು ಕೋರಲಾಗಿತ್ತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಸಮಿತಿಯ ಶಿಫಾರಸಿನಂತೆ ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಭಾವಚಿತ್ರದಲ್ಲಿ ಈ ಕೆಳಗಿನ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ.
* ನಾಡದೇವತೆಯ ಹಿನ್ನೆಲೆಯಲ್ಲಿ ಕರ್ನಾಟಕದ ನಕ್ಷೆ ಇರುತ್ತದೆ.
* ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿ ಭಾವ ಕಂಗೊಳಿಸಿದೆ.
* ದ್ವಿಭುಜ ಅಂದರೆ ಎರಡು ಕೈಗಳು ವಾಸ್ತವಿಕತೆಗೆ ಹತ್ತಿರವಾಗಿದೆ.
* ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡುತ್ತಿದ್ದರೆ, ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು ಜ್ಞಾನ ಸಮೃದ್ಧಿಯನ್ನು ಪ್ರವಹಿಸುವ ನಿಟ್ಟನ್ನು ಸೂಚಿಸುತ್ತಿದೆ.
* ನಾಡದೇವತೆಯು ಕುಳಿತಿರುವ ಭಂಗಿಯು ಭವ್ಯತೆಯನ್ನು ಹಾಗೂ ಸಾಕ್ಷ್ಯತೆಯನ್ನು ಪ್ರತಿಬಿಂಬಿಸುತ್ತಿದೆ.

ಇಂದಿನ ಪ್ರಮುಖ ಸುದ್ದಿ :-   ಸರ್ಕಾರದ ‘ಉಚಿತ ವಿದ್ಯುತ್ʼ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ

* ಕರ್ನಾಟಕದ ಧ್ವಜ ಕನ್ನಡಾಭಿಮಾನದ ಸಂಕೇತವಾಗಿ ರಾರಾಜಿಸುತ್ತಿದೆ.
* ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿಯನ್ನು ಸೂಚಿಸುತ್ತಿದೆ.
* ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು ನಮ್ಮ ನಾಡನ್ನು ಆಳಿದ ಸಾಮ್ರಾಜ್ಯಗಳ ವೈಭವವನ್ನು ಸಾರುತ್ತಿವೆ.
* ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಭುಜದ ಮೇಲೆ ಕರ್ನಾಟಕ ವೈಶಿಷ್ಟ್ಯದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ ಹಾರಗಳು, ಕರ್ನಾಟಕ ಲಾಂಛನ – ಗಂಡ ಭೇರುಂಡ ಪದಕ ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ ಉದ್ದನೆಯ ವೈಜಯಂತಿ ಹಾರ, ನಡುವೆ ಹೊಯ್ಸಳ ಲಾಂಛನದ ಪದಕ ನಾಡದೇವತೆಯನ್ನು ಅಲಂಕರಿಸಿದೆ.
ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು ಸೌಭಾಗ್ಯದ್ಯೋತಕಗಳಾಗಿವೆ. ತೆಳುವಾದ ಮೃದುವಾದ ಹೂವಿನ ತೋಮಾಲೆಯು ನಾಡದೇವತೆಯ ಸಂಪೂರ್ಣ ಅಲಂಕಾರಕ್ಕೆ ಒಂದು ರೀತಿಯ ಮೆರಗು ನೀಡಿದೆ, ಕೆಳಗೆ ಸುಂದರ ಸದೃಢ ತಾವರೆ ಹೂವು(ಕಮಲ) ದೇವಿಯ ಮೃದುವಾದ ಕಾಲುಗಳಿಗೆ ಆಸರೆ ನೀಡಿದೆ.

ಇಂದಿನ ಪ್ರಮುಖ ಸುದ್ದಿ :-   ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement