ಬೆಳಗಾವಿ ಗಡಿ ವಿವಾದ : ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ, ಸಮರ್ಥ ಕಾನೂನು ತಂಡ ರಚನೆ-ಸಿಎಂ ಬೊಮ್ಮಾಯಿ

ಬೆಂಗಳೂರು: ಮಹಾರಾಷ್ಟ್ರದ ಜೊತೆಗಿನ ಗಡಿ ವಿವಾದ ಕುರಿತಂತೆ ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸಲು ಬಲಿಷ್ಠ ಕಾನೂನು ತಂಡ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಿರಿಯ ವಕೀಲರಾದ ಮುಕುಲ್‌ ರೋಹಟಗಿ, ಶಾಮ್‌ ದಿವಾನ್‌, ಉದಯ್‌ ಹೊಳ್ಳ ಹಾಗೂ ಮಾರುತಿ ಜಿರಲೆ ಅವರು ತಂಡದಲ್ಲಿದ್ದಾರೆ. ರಾಜ್ಯದ ಪರ ವಾದ ಮಂಡನೆಗೆ ಅಗತ್ಯವಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಡಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಸರ್ವಪಕ್ಷ ಸಭೆ ನಡೆಸಿದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ತುರ್ತು ಸಭೆ ನಡೆಸಿದ ಬೊಮ್ಮಾಯಿ, ತುರ್ತು ಸಭೆ ನಡೆಸಿ ಚರ್ಚಿಸಿದ ವಿಚಾರವಾಗಿ ಪ್ರತಿಪಕ್ಷದ ನಾಯಕರಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಅರ್ಜಿಗೆ ಇನ್ನೂ ಮಾನ್ಯತೆ ಸಿಕ್ಕಿಲ್ಲ, ಸುಪ್ರೀಂಕೋರ್ಟ್‌ ಇನ್ನೂ ಪರಿಗಣನೆಗೆ ತೆಗೆದುಕೊಂಡಿಲ್ಲ. ಸಂವಿಧಾನದ ಪರಿಚ್ಛೇದ 3ರ ಪ್ರಕಾರ ರಾಜ್ಯಗಳ ಪುನರ್‌ ವಿಂಗಡಣೆಯಾಗಿದೆ. ಅದನ್ನು ಪುನರ್‌ ಪರಿಶೀಲನೆ ಕೈಗೊಂಡಿದ್ದು ಈವರೆಗೆ ಇಲ್ಲ ಎಂದು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಗಡಿ ವಿವಾದ ಅದು ಅಲ್ಲಿ ರಾಜಕೀಯದ ವಸ್ತುವಾಗಿದೆ. ಅವರ ಪ್ರಯತ್ನಕ್ಕೆ ಯಶಸ್ಸು ಸಿಗುವುದಿಲ್ಲ. ನಮ್ಮ ಗಡಿ ರಕ್ಷಣೆಗೆ ಸಶಕ್ತರಾಗಿದ್ದೇವೆ. ಕನ್ನಡ ನಾಡು, ನುಡಿ, ನೆಲದ ವಿಷಯದಲ್ಲಿ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದರು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement