ವಿದ್ಯಾರ್ಥಿನಿಯರ 1,200 ಅರೆನಗ್ನ ವೀಡಿಯೋ ಚಿತ್ರೀಕರಿಸಿದ್ದ ವಿದ್ಯಾರ್ಥಿಯ ಬಂಧನ

posted in: ರಾಜ್ಯ | 0

ಬೆಂಗಳೂರು: ಮಹಿಳೆಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಮಂಗಳವಾರ ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ಕ್ಯಾಮೆರಾ ಫಿಕ್ಸ್ ಮಾಡುವಾಗ ಆರೋಪಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಬಂಧಿತ ವಿದ್ಯಾರ್ಥಿಯನ್ನು ಬೆಂಗಳೂರಿನ ಹೊಸಕೆರೆಹಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿ ಶುಭಂ ಎಂ ಆಜಾದ್ ಎಂದು ಗುರುತಿಸಲಾಗಿದೆ. ಬಿಬಿಎ ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ ಶುಭಂ, ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾವನ್ನು ಅಳವಡಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಲೇಜು ಹುಡುಗಿಯರು ಮತ್ತು ಅವರ ಸ್ನೇಹಿತರ 2,000 ಕ್ಕೂ ಹೆಚ್ಚು ವೀಡಿಯೊಗಳು ಮತ್ತು ಫೋಟೋಗಳನ್ನು ಆತ ರೆಕಾರ್ಡ್ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಗಳು ತೋರಿಸಿವೆ. ತನ್ನ ಸ್ನೇಹಿತರ ಖಾಸಗಿ ಮತ್ತು ಮುಜುಗರದ ಫೋಟೋಗಳನ್ನು ತೆಗೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಆರೋಪಿ ಶುಭಂ ಬಾತ್ ರೂಂನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಲು ಯತ್ನಿಸಿದಾಗ ವಿದ್ಯಾರ್ಥಿನಿಯರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಳವಡಿಸಲು ಬಂದಾಗ ವಿದ್ಯಾರ್ಥಿನಿಯರು ಕೂಗಿಕೊಂಡ ನಂತರ ಆರೋಪಿ ಪರಾರಿಯಾಗಿದ್ದ.
ಸ್ಥಳದಿಂದ ಪರಾರಿಯಾಗಿದ್ದರೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಸಿಕ್ಕಿಬಿದ್ದಿದ್ದಾನೆ. ಶುಭಂಈ ಮೊದಲು ಸಹ ಹುಡುಗಿಯರ ಖಾಸಗಿ ವಿಡಿಯೋ ತೆಗೆಯುವಾಗ ಸಿಕ್ಕಿಬಿದ್ದಿದ್ದಾನೆ. ನಂತರ, ಕ್ಷಮೆಯಾಚಿಸಿದ್ದ ಮತ್ತು ಕಾಲೇಜು ಆಡಳಿತ ಆತನನ್ನು ಎಚ್ಚರಿಕೆ ನೀಡಿ ಬಿಟ್ಟಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಈಸಲ ಕಾಲೇಜಿನವರು ಗಿರಿನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆತನ ಮೊಬೈಲ್ ವಶಪಡಿಸಿಕೊಂಡಿದ್ದು, 1,200 ಕ್ಕೂ ಹೆಚ್ಚು ಖಾಸಗಿ ವೀಡಿಯೊಗಳು ಮತ್ತು ಹುಡುಗಿಯರ ಫೋಟೋಗಳು ಪತ್ತೆಯಾಗಿವೆ.
ಆರೋಪಿಯ ಬಳಿ ಇನ್ನೂ ಒಂದು ಮೊಬೈಲ್ ಫೋನ್ ಇದೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಅದನ್ನು ಪೊಲೀಸರು ಇನ್ನೂ ವಶಪಡಿಸಿಕೊಳ್ಳಬೇಕಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ದುಬೈ ಪ್ರವಾಸ ಮಾಡಲು ಡಿ. ಕೆ. ಶಿವಕುಮಾರಗೆ ಅನುಮತಿ ನೀಡಿದ ವಿಶೇಷ ನ್ಯಾಯಾಲಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement