ಹಿರಿಯೂರು ಪಟ್ಟಣದಲ್ಲಿ ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಕೆಲವರಿಗೆ ಗಾಯ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

posted in: ರಾಜ್ಯ | 0

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ (escort)ಪೊಲೀಸ್ ವಾಹನ ಪಲ್ಟಿಯಾದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದ ವರದಿಯಾಗಿದೆ.
ಕೆಲವು ಪೊಲೀಸರು ಗಾಯಗೊಂಡಿದ್ದು ಪಾದಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಾಣಿವಿಲಾಸ ಡ್ಯಾಂನಿಂದ ಹಿರಿಯೂರಿಗೆ ಬರುವ ವೇಳೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ, ಮಗನಿಗೆ ಗಾಯವಾಗಿದೆ. ಅವರನ್ನು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಅವಘಡದಲ್ಲಿ ಸಿಪಿಐ ರಮಾಕಾಂತ್ ಸೇರಿ ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಒಟ್ಟು ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಅನೇಕ ವರ್ಷಗಳ ಬಳಿಕ ಭರ್ತಿಯಾಗಿ ಕೋಡಿ ಬಿದ್ದಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಇಂದು, ಮಂಗಳವಾರ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದರು. ಕಾರ್ಯಕ್ರಮ ಮುಗಿದ ಬಳಿಕ ಬೊಮ್ಮಾಯಿ ಅವರು ವಾಣಿ ವಿಲಾಸ ಡ್ಯಾಂನಿಂದ ಹಿರಿಯೂರು ಪಟ್ಟಣದ ನಹರು ಮೈದಾನಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.

ವಾಣಿವಿಲಾಸ ಡ್ಯಾಂ ವೀಕ್ಷಿಸಿ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಮುಖ್ಯಮಂತ್ರಿಗಳು ತೆರಳುತ್ತಿದ್ದರು. ಈ ವೇಳೆ ಅಡ್ಡಬಂದ ಬೈಕ್​ ಡಿಕ್ಕಿಯಾಗುವುದನ್ನು ತಪ್ಪಿಸಲು ಎಸ್ಕಾರ್ಟ್​ ವಾಹನದ ಚಾಲಕ ಒಮ್ಮೆಲೇ ಬ್ರೇಕ್​ ಹಾಕಿದ್ದರಿಂದ ನಿಯಂತ್ರಣ ತಪ್ಪಿದ ಎಸ್ಕಾರ್ಟ್​ ವಾಹನ ಪಲ್ಟಿಯಾಗಿದೆ ಎನ್ನಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ದಿ ಹಿಂದೂ ಸಂಗೀತ ಸ್ಪರ್ಧೆ: ಬಾಲಪ್ರತಿಭೆ ವಿಭಾಗದಲ್ಲಿ ಕುಮಟಾದ ಅದಿತಿ ಶಾನಭಾಗ ಪ್ರಥಮ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement