ಜೆಡಿಎಸ್‌ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದ್ರೆ ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ನೀಡಲು ಚಿಂತನೆ: ಕುಮಾರಸ್ವಾಮಿ

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡುವ ಮುಕ್ತ ಅವಕಾಶ ಪಕ್ಷದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಕ್ಯಾಲನೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಕುಮಾರಸ್ವಾಮಿ ದೆಹಲಿಗೆ ಹೋದರೆ ತಾವೇ ಮುಖ್ಯಮಂತ್ರಿ ಆಗಬಹುದೆಂದು ಸಿ.ಎಂ.ಇಬ್ರಾಹಿಂ ಕೂಡ ಹೇಳಿದ್ದಾರೆ. ಈ ರೀತಿ ಚರ್ಚೆ ಮಾಡಲು ಅವಕಾಶ ಇರುವುದು ನಮ್ಮ ಜೆಡಿಎಸ್‌ನಲ್ಲಿ ಮಾತ್ರ ಸಾಧ್ಯ ಎಂದು ಹೇಳಿದರು.

ದಲಿತರು ಹಾಗೂ ಮಹಿಳೆಯರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಸಿದ್ಧನಿದ್ದೇನೆ. ಎಲ್ಲ ರಾಜಕೀಯ ಪಕ್ಷಗಳು ದಲಿತರನ್ನು ಅಸಡ್ಡೆಯಿಂದ ನೋಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕೇವಲ ದಲಿತರ ಮತ ಪಡೆಯಲು ಈ ಘೋಷಣೆ ಮಾಡುತ್ತಿಲ್ಲ. ಮಹಿಳೆಯರ ರಕ್ಷಣೆಗಾಗಿ ಉಪಮುಖ್ಯಮಂತ್ರಿ ಸ್ಥಾನ ಕೊಡಲಿಕ್ಕೂ ಸಿದ್ಧ ಎಂದರು.
‘ಬಿಜೆಪಿಯಿಂದ ಒಂದೊಂದು ಭಾಗದಲ್ಲಿ ಒಂದೊಂದು ಸಮುದಾಯದ ಸಮಾವೇಶ ನಡೆಸುತ್ತಿದ್ದಾರೆ. ಕಾಂಗ್ರೆಸ್‌ನವರೂ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಆದರೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ಹಾಸಿಗೆ, ದಿಂಬಿನಲ್ಲೂ ಕಾಂಗ್ರೆಸ್‌ನವರು ಹಣ ಹೊಡೆದರು ಎಂಬುದಾಗಿ ಬಿಜೆಪಿ ಆರೋಪಿಸಿತ್ತು. ಈಗ ಕಾಂಗ್ರೆಸ್‌ನವರು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ, ಅವರು ಸಮಾವೇಶಗಳನ್ನು ಮಾಡಿ ಆಶ್ವಾಸನೆ ನೀಡಿದರೂ ದಲಿತರ ಪರಿಸ್ಥಿತಿ ಮಾತ್ರ ಸುಧಾರಿಸಿಲ್ಲ ಎಂದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement