ಟಿಪ್ಪು ನಿಜ ಕನಸುಗಳು ಪುಸ್ತಕದ ವಿತರಣೆ, ಮಾರಾಟಕ್ಕೆ ನ್ಯಾಯಾಲಯದ ತಡೆಯಾಜ್ಞೆ

posted in: ರಾಜ್ಯ | 0

ಬೆಂಗಳೂರು: ಟಿಪ್ಪು ಸುಲ್ತಾನ್ ಕುರಿತಾದ ಪುಸ್ತಕ ವಿತರಣೆ ಮತ್ತು ಮಾರಾಟಕ್ಕೆ ಇಲ್ಲಿನ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.
ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಅವರು ಬರೆದಿರುವ ‘ಟಿಪ್ಪು ನಿಜ ಕನಸುಗಳು’ ಎಂಬ ಪುಸ್ತಕವನ್ನು ಡಿಸೆಂಬರ್ 3ರ ವರೆಗೆ ಮಾರಾಟ ಮಾಡದಂತೆ ಲೇಖಕ, ಪುಸ್ತಕ ಪ್ರಕಾಶಕರಾದ ಅಯೋಧ್ಯೆ ಪ್ರಕಾಶನ ಮತ್ತು ರಾಷ್ಟ್ರೋತ್ಥಾನ ಮುದ್ರಾಣಾಲಯಕ್ಕೆ ಮಂಗಳವಾರ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಟಿಪ್ಪು ನಾಟಕ (Drama) ಪ್ರದರ್ಶನಕ್ಕೆ‌ ಯಾವುದೇ ಅಡ್ಡಿ ಇಲ್ಲ. ನಾಟಕ ಪ್ರದರ್ಶನಕ್ಕೆ ತಡೆ ನೀಡಲಾಗುವುದಿಲ್ಲ ಎಂದು ಕೋರ್ಟ್‌ ಹೇಳಿದೆ.
ಬೆಂಗಳೂರು ನಿವಾಸಿಯಾದ ಜಿಲ್ಲಾ ವಕ್ಫ್‌ ಮಂಡಳಿಯ ಮಾಜಿ ಅಧ್ಯಕ್ಷ ರಫಿವುಲ್ಲಾ ಬಿ ಎಸ್‌ ಎಂಬವರು ಸಲ್ಲಿಸಿದ್ದ ಅಸಲು ದಾವೆ ವಿಚಾರಣೆ ನಡೆಸಿದ 15ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಜೆ ಆರ್‌ ಮೆಂಡೋನ್ಸಾ ಅವರ ನೇತೃತ್ವದ ಪೀಠವು ಈ ಆದೇಶ ಮಾಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇತಿಹಾಸದಿಂದ ಯಾವುದೇ ಬೆಂಬಲ ಅಥವಾ ಸಮರ್ಥನೆ ಇಲ್ಲದೆ ಪುಸ್ತಕದಲ್ಲಿ ಟಿಪ್ಪುವಿನ ಬಗ್ಗೆ ತಪ್ಪು ಮಾಹಿತಿ ಇದೆ ಎಂದು ಆರೋಪಿಸಿ ಜಿಲ್ಲಾ ವಕ್ಫ್ ಬೋರ್ಡ್ ಸಮಿತಿಯ ಮಾಜಿ ಅಧ್ಯಕ್ಷ ಬಿ.ಎಸ್.ರಫೀವುಲ್ಲಾ ಅವರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಪುಸ್ತಕದಲ್ಲಿ ಬಳಸಿರುವ ಎಂಬ ಪದವು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿದೆ ಎಂದು ಹೇಳಿದ್ದರು. ಪುಸ್ತಕ ಸುಳ್ಳುಗಳಿಂದ ತುಂಬಿದೆ. ಲೇಖಕರು ಹೇಳಿದ ವಿಷಯಗಳಿಗೆ ಯಾವುದೇ ದಾಖಲೆಗಳನ್ನು ಒದಗಿಸಿಲ್ಲ. ಪುಸ್ತಕದ ಪ್ರಕಟಣೆಯು ಅಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುತ್ತದೆ, ಸಾರ್ವಜನಿಕ ಶಾಂತಿಗೆ ಭಂಗ ತರುತ್ತದೆ ಎಂದು ಅವರು ಪ್ರತಿಪಾದಿಸಿದ್ದರು.

ಇಂದಿನ ಪ್ರಮುಖ ಸುದ್ದಿ :-   ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಅರ್ಜಿ ಪುರಸ್ಕರಿಸಿದ 15ನೇ ಹೆಚ್ಚುವರಿ ಸಿಟಿ ಸಿವಿಲ್‌ ನ್ಯಾ. ಜೆ ಆರ್‌ ಮೆಂಡೋನ್ಸಾ ಅವರು ಪುಸ್ತಕ ಮಾರಾಟಕ್ಕೆ ತಡೆ ನೀಡಿದ್ದಾರೆ. ಪುಸ್ತಕ ಪ್ರಕಟಿಸಿರುವ ಅಯೋಧ್ಯಾ ಪ್ರಕಾಶನ ಮತ್ತು ಪುಸ್ತಕ ಮುದ್ರಿಸಿರುವ ರಾಷ್ಟ್ರೋತ್ಥಾನ ಮುದ್ರಣಾಲಯಕ್ಕೆ ಪುಸ್ತಕ ಹಂಚಿಕೆ ಮತ್ತು ಮಾರಾಟ ಮಾಡದಂತೆ ಆದೇಶ ನೀಡಲಾಗಿದೆ.
ಪ್ರತಿವಾದಿಗಳು ನ್ಯಾಯಾಲಯಕ್ಕೆ ಹಾಜರಾಗುವವರೆಗೆ ಪುಸ್ತಕವನ್ನು ವಿತರಣೆ ಮಾಡಿದರೆ, ಅರ್ಜಿಯ ಉದ್ದೇಶವು ಸೋಲುತ್ತದೆ. ಆದ್ದರಿಂದ, ಈ ಹಂತದಲ್ಲಿ ಅನುಕೂಲತೆಯ ಸಮತೋಲನವು ತಡೆಯಾಜ್ಞೆ ನೀಡುವುದು ದೂರುದಾರರ ಪರವಾಗಿರುತ್ತದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ನ್ಯಾಯಾಲಯವು ಮೂವರು ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿ ಮಾಡಿ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement