ದತ್ತು ಮಕ್ಕಳೂ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರು : ಹೈಕೋರ್ಟ್‌

posted in: ರಾಜ್ಯ | 0

ಬೆಂಗಳೂರು: : ದತ್ತು ಮಕ್ಕಳು ಸಹ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರು ಎಂದು ಕರ್ನಾಟಕ ಹೈಕೋರ್ಟ್‌ನ  ವಿಭಾಗೀಯ ಪೀಠವು  ಆದೇಶಿಸಿದೆ.
ದತ್ತು ಮಕ್ಕಳಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿ ಏಕ ಸದಸ್ಯ ಪೀಠವು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬಾಗಲಕೋಟೆಯ ಬನಹಟ್ಟಿ ತಾಲೂಕಿನ ನಿವಾಸಿ ಎಸ್ ಗಿರೀಶ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಸೂರಜ್‌ ಗೋವಿಂದರಾಜ್‌ ಮತ್ತು ಜಿ ಬಸವರಾಜ ಅವರ ನೇತೃತ್ವದ ವಿಭಾಗೀಯ ಪೀಠವು ಮಾನ್ಯ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಸ್ವಂತ ಮಗ ಅಥವಾ ಮಗಳಾಗಲಿ, ದತ್ತು ಮಗ ಅಥವಾ ಮಗಳಾಗಲಿ ಅವರು ಮಕ್ಕಳೇ ಆಗಿರುತ್ತಾರೆ. ಇವರ ನಡುವೆ ತಾರತಮ್ಯವಿದೆ ಎಂದು ನ್ಯಾಯಾಲಯ ಒಪ್ಪಿಕೊಂಡರೆ ದತ್ತು ಸ್ವೀಕಾರದ ಉದ್ದೇಶ ಈಡೇರಲು ಸಾಧ್ಯವಿಲ್ಲ. ದತ್ತು ಮಕ್ಕಳು ಸಹ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ” ಎಂದು ಪೀಠವು ಹೇಳಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಅನುಕಂಪದ ಉದ್ಯೋಗಕ್ಕೆ ಸಲ್ಲಿಕೆಯಾದ ಅರ್ಜಿ ಪರಿಗಣಿಸುವಾಗ ಸ್ವಾಭಾವಿಕ ಮಕ್ಕಳಿಗೆ ಸರಿಸಮನಾಗಿ ದತ್ತು ಮಕ್ಕಳನ್ನು ಪರಿಗಣಿಸಬೇಕು ಎಂದು ೨೦೨೧ರಲ್ಲಿ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಮೇಲ್ಮನವಿದಾರ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ ನಂತರ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ ಎಂಬ ಕಾರಣಕ್ಕೆ ತಿದ್ದುಪಡಿ ನಿಯಮಗಳ ಲಾಭವನ್ನು ಮೇಲ್ಮನವಿದಾರನಿಗೆ ನಿರಾಕರಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.
ಮೃತ ವಿನಾಯಕ ಅವರು ಪತ್ನಿ, ಸ್ವಾಭಾವಿಕ ಪುತ್ರ ಮತ್ತು ಪುತ್ರಿ ಅವರನ್ನು ಹೊಂದಿದ್ದರು. ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವಾಗ ಅರ್ಜಿದಾರರ ಆರ್ಥಿಕ ಸಂಕಷ್ಟವನ್ನು ಪರಿಗಣಿಸಬೇಕಾಗುತ್ತದೆ. ಸ್ವಂತ ಪುತ್ರ ಮೃತಪಟ್ಟ ಕಾರಣಕ್ಕೆ ಮನೆಯ ಜವಾಬ್ದಾರಿ ನೋಡಿಕೊಳ್ಳಲು ಗಿರೀಶ್ ಅವರನ್ನು ವಿನಾಯಕ ದತ್ತು ಪಡೆದಿದ್ದಾರೆ. ಅವರ ಸ್ವಾಭಾವಿಕ ಮಗಳು ಅನುಕಂಪದ ಉದ್ಯೋಗ ನೀಡಬೇಕಾಗುತ್ತದೆ. ಆದರೆ, ಆಕೆ ದೈಹಿಕ ಹಾಗೂ ಮಾನಸಿಕ ವಿಕಲಚೇತನರಾಗಿದ್ದರೆ. ಇಂತಹ ಸಂದರ್ಭದಲ್ಲಿ ಮನೆ ಜವಾಬ್ದಾರಿ ಹೊತ್ತಿರುವ ದತ್ತು ಪುತ್ರನಿಗೆ ಅನುಕಂಪದ ಆಧಾರದ ಉದ್ಯೋಗ ನೀಡಬೇಕಾಗುತ್ತದೆ. ಅನುಕಂಪದ ಆಧಾರದ ಉದ್ಯೋಗದ ನಿಯಮಗಳಿಗೆ ತಿದ್ದುಪಡಿ ತಂದಿರುವುದರಿಂದ, ದತ್ತು ಪುತ್ರ ಮತ್ತು ಸ್ವಾಭಾವಿಕ ಪುತ್ರನ ನಡುವೆ ತಾರತಮ್ಯ ಮಾಡುವುದು ಸಂವಿಧಾನದ ಪರಿಚ್ಛೇದ 14ರ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಲಿದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.
ಅಂತಿಮವಾಗಿ ಅನುಕಂಪದ ಉದ್ಯೋಗಕ್ಕಾಗಿ ಮೇಲ್ಮನವಿದಾರ ಗಿರೀಶ್ (ದತ್ತು ಪುತ್ರ) ಸಲ್ಲಿಸಿರುವ ಅರ್ಜಿಯನ್ನು 12 ವಾರಗಳಲ್ಲಿ ಪರಿಗಣಿಸಬೇಕು ಎಂದು ಅಭಿಯೋಜನಾ ಇಲಾಖೆಗೆ ಹೈಕೋರ್ಟ್ ನಿರ್ದೇಶಿಸಿದೆ.

ಇಂದಿನ ಪ್ರಮುಖ ಸುದ್ದಿ :-   ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ...!

ಪ್ರಕರಣದ ಹಿನ್ನೆಲೆ
ವಿನಾಯಕ ಎಂ. ಮುತ್ತಟ್ಟಿ ಬನಹಟ್ಟಿಯ ಜೆಎಂಎಫ್‌ಸಿ ಕೋರ್ಟ್‌ನ ಸಹಾಯಕ ಪಬ್ಲಿಕ್‌ ಪ್ರಾಸಿಕೂಟರ್‌ ಕಚೇರಿಯಲ್ಲಿ ದಲಾಯತ್‌ (ಗ್ರೂಪ್‌-ಡಿ ನೌಕರ) ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಪುತ್ರ 2010ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ. ನಂತರ 2011ರಲ್ಲಿ ಗಿರೀಶ ಎಂಬಾತನನ್ನು ಅವರು ದತ್ತು ಪಡಿದುಕೊಂಡಿದ್ದರು. ಆ ಸಂಬಂಧ ದತ್ತು ಸ್ವೀಕಾರ ಪತ್ರ ಬರೆಸಿದ್ದರು. 2018ರ ಮಾರ್ಚ್‌ 27ರಂದು ವಿನಾಯಕ ಮೃತಪಟ್ಟಿದ್ದರು. ಆದರೆ ಅನುಕಂಪದ ಆಧಾರದಲ್ಲಿ ತಂದೆಯ ಉದ್ಯೋಗವನ್ನು ದತ್ತು ಪುತ್ರ ಗಿರೀಶ ಕೋರಿದ್ದನ್ನು ಇಲಾಖೆಯ ನಿರ್ದೇಶಕರು 2018ರ ಆಗಸ್ಟ್‌ 7ರಂದು ತಿರಸ್ಕರಿಸಿದ್ದರು.
ಅರ್ಜಿದಾರರು ದತ್ತು ಮಗುವಾಗಿದ್ದು, ಅನುಕಂಪದ ಉದ್ಯೋಗ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದರು. ಈ ಆದೇಶ ಪ್ರಶ್ನಿಸಿ ಗಿರೀಶ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ಸಹ ತಿರಸ್ಕರಿಸಿತ್ತು. ಹಾಗಾಗಿ, ಆತ ವಿಭಾಗೀಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಕಿತ್ತೂರು ತಹಶೀಲ್ದಾರ ಲೋಕಾಯುಕ್ತ ಬಲೆಗೆ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement