ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಅಮೃತ ಪಾಲ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ.
ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಮೂರ್ತಿ ಕೆ. ಲಕ್ಷ್ಮಿ ನಾರಾಯಣ ಭಟ್ ಅವರು ಜಾಮೀನು ತಿರಸ್ಕರಿಸಿ ಆದೇಶ ನೀಡಿದ್ದಾರೆ.
ಪಿಎಸ್ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದ ಅಮೃತ್ ಪಾಲ್ ಬಳಿ ಸೇಫ್ ಲಾಕರ್​​ನ ಕೀ ಇತ್ತು. ಇದನ್ನು ಕಿರಿಯ ಅಧಿಕಾರಿಗಳಿಗೆ ಕೊಟ್ಟು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರ ವಿರುದ್ಧ ಆರೋಪವಿದೆ.

ಪಿಎಸ್ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದ ಅಮೃತ್ ಪಾಲ್, ಸೇಫ್ ಲಾಕರ್​​ನ ಕೀ ಅಮೃತ್ ಪಾಲ್ ಬಳಿಯಿತ್ತು. ಕಿರಿಯ ಅಧಿಕಾರಿಗಳಿಗೆ ಕೀ ಕೊಟ್ಟು ದುರುಪಯೋಗ ಮಾಡಲಾಗಿದೆ. ಪ್ರಕರಣದ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ನೀಡದಂತೆ ಎಸ್​​ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತ್ ಪಾಲ್ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿತ್ತು. ಇದೀಗ ಬೆಂಗಳೂರಿನ 24ನೇ ಸಿಸಿಹೆಚ್ ಕೋರ್ಟ್ ಸಹ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಮುಖ ಸುದ್ದಿ :-   ಬೆಳಗಾವಿ: ಮಗಳ ಮದುವೆ ಮಾಡಿಕೊಡಲು ಒಪ್ಪದ್ದಕ್ಕೆ ತಾಯಿ-ಮಗನನ್ನು ಭೀಕರವಾಗಿ ಕೊಲೆ ಮಾಡಿದ ಯುವಕ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement