ಕಾಡಾನೆ ಜೊತೆಗಿನ ಕಾದಾಟದಲ್ಲಿ ಗಾಯಗೊಂಡು ಮೃತಪಟ್ಟ ದಸರಾ ಆನೆ ಗೋಪಾಲಸ್ವಾಮಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಗಜಪಡೆಯ ಕೇಂದ್ರಬಿಂದುಗಳಲ್ಲಿ ಒಂದಾದ ಗೋಪಾಲಸ್ವಾಮಿ (39) ಹೆಸರಿನ ಆನೆ ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದೆ.
ಹುಣಸೂರು ತಾಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆಯನ್ನು ಕಾಡಿಗೆ ಬಿಡಲಾಗಿತ್ತು. ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಕಾಡಾನೆ ಜೊತೆ ಕಾದಾಟ ನಡೆಸಿದ ನಂತರ ಆನೆ ಗೋಪಾಲಸ್ವಾಮಿ ಮೃತಪಟ್ಟಿದೆ. ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ವಲಯದ ಹನಗೋಡು ಬಳಿಯ ಕೊಳವಿಗೆ ಸಮೀಪದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದೆ. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ (ನವೆಂಬರ್ 13) ಮೃತಪಟ್ಟಿದೆ.

ಇತ್ತೀಚಿಗೆ ನಡೆದ ಮೈಸೂರು ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು. ಈ ಬಾರಿ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು.14 ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು.
ಗೋಪಾಲಸ್ವಾಮಿ ಆನೆ ಅತ್ಯಂತ ತೂಕದ, ಬಲಿಷ್ಠ ಮತ್ತು ಅತ್ಯಂತ ಬುದ್ಧಿವಂತ ಆನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಸುಮಾರು 20 ವರ್ಷಗಳ ಕಾಲ ದಸರಾದಲ್ಲಿ ಭಾಗವಹಿಸುವ ಸಾಮರ್ಥ್ಯವಿದ್ದ ಈ ಆಕರ್ಷಕ ಆನೆಯನ್ನು ಅಂಬಾರಿ ಹೊರುವ ಅಭಿಮನ್ಯುವಿಗೆ ಪರ್ಯಾಯ ಎಂದೇ ಪರಿಗಣಿಸಲಾಗಿತ್ತು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement