ಕುಮಟಾ: ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ

posted in: ರಾಜ್ಯ | 0

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಶಕ್ತಿ ಸ್ಥಳಗಳಲ್ಲೊಂದಾದ ಕುಮಟಾ ತಾಲೂಕಿನ ಹೊಳೆಗದ್ದೆ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇವಿಗೆ ಪೂಜೆ ಸಲ್ಲಿಸಿದರು.
ಕುಮಟಾ ಕಾಂಗ್ರೆಸ್‌ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಆಗಮಿಸಿದ ಅವರು ಪೂಜೆ ಸಲ್ಲಿಸಿ ಶ್ರೀ ದೇವಿಯ ಆಶೀರ್ವಾದ ಬೇಡಿದರು. ದೇವಾಲಯದ ಆಡಳಿತ ಕಮಿಟಿಯ ಕಾರ್ಯದರ್ಶಿ ಸೀತಾರಾಮ ಭಟ್‌,ವಿ.ಜಿ.ಹೆಗಡೆ, ಡಾ.ದಯಾನಂದ ಭಟ್‌, ಜಯರಾಮ ಭಟ್‌ ಗುಡಬಳ್ಳಿ, ನಾಗರಾಜ ಜೋಶಿ ಗುಡಬಳ್ಳಿ, ಶ್ರೀಧರ ಭಟ್‌ ಗುಡಬಳ್ಳಿ, ವಿನಾಯಕ ಜೋಶಿ , ಮುಖ್ಯ ಅರ್ಚಕ ಗಣಪತಿ ಸಭಾಹಿತ, ಗೋಪಾಲ ಭಟ್‌ ಹಾಗೂ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಡಿ.ಕೆ ಶಿವಕುಮಾರ ಅವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಶಿವಕುಮಾರ ಅವರೊಂದಿಗೆ ಡಾ. ಶಂಕರ ಗುಹಾ, ಮಾಜಿ ಸಚಿವ ಆರ್‌.ವಿ.ದೇಶಪಾಂಡೆ, ಮಾಜಿ ಶಾಸಕರಾದ ಮಂಕಾಳ ವೈದ್ಯ ಹಾಗೂ ಶಾರದಾ ಶೆಟ್ಟಿ, ಕಾಂಗ್ರೆಸ್‌ ಮುಖಂಡ ಶಿವಾನಂದ ಹೆಗಡೆ ಮೊದಲಾದವರಿದ್ದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement