ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದೊಳಗೆ ಬದಲಾವಣೆಗೆ ಮುಂದಾಗಿದ್ದು, ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಜಾರಿಗೆ ಬರುವಂತೆ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿ. ಆರ್. ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಾದಗಿರಿ ಜಿಲ್ಲೆಗೆ ಬಸರೆಡ್ಡಿ, ಕೊಡಗು ಜಿಲ್ಲೆಗೆ ಧರ್ಮಜ ಉತ್ತಪ್ಪ, ತುಮಕೂರು ಜಿಲ್ಲೆಗೆ ಚಂದ್ರಶೇಖರ ಗೌಡ ಹಾಗೂ ಹಾಸನ ಜಿಲ್ಲೆಗೆ ಇ. ಹೆಚ್. ಲಕ್ಷ್ಮಣ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ