ಬಿಜೆಪಿಯವರು ಹೇಳುವುದೇ  ಒಂದು ಮಾಡುವುದು ಇನ್ನೊಂದು : ಕುಮಟಾ ಸಮಾವೇಶದಲ್ಲಿ.ಶಿವಕುಮಾರ

posted in: ರಾಜ್ಯ | 0

ಕುಮಟಾ: ಬಿಜೆಪಿಯವರು ಹಿಂದು ಎಂದು ಬಾಯಲ್ಲಿ ಹೇಳುತ್ತಾರೆ, ಆದರೆ ಜಾತೀಯತೆಯ ಮೇಲೆಯೇ ಚುನಾವಣೆ ಮಾಡುತ್ತಾರೆ. ಅವರದ್ದು ಹೇಳುವುದು ಒಂದು ಹಾಗೂ ಮಾಡುವುದು ಇನ್ನೊಂದಾಗಿದೆ. ಕಾಂಗ್ರೆಸ್‌ಗೆ ಎಲ್ಲ ಸಮುದಾಯಗಳೂ ಒಂದೇ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ. ಮಾನವೀಯತೆ ನೆಲೆಯಲ್ಲಿ ನಮ್ಮ ಪಕ್ಷ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕಾರಣಕ್ಕಾಗಿ ರಾಷ್ಟ್ರಧ್ವಜವನ್ನ ಕೊರಳಲ್ಲಿ ಧರಿಸಲು ಕಾಂಗ್ರೆಸ್‌ನವರಿಂದ ಮಾತ್ರ ಸಾಧ್ಯ. ಎಂದು ಹೇಳಿದರು.
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆಗೆ ಎಲ್ಲರೂ ಬಂದು ಶಕ್ತಿ ತುಂಬಿದ್ದಾರೆ. ಬಂದವರು ರಾಹುಲ್ ಗಾಂಧಿಯವರಿಗಷ್ಟೇ ಶಕ್ತಿ ಕೊಟ್ಟಿಲ್ಲ. ಡೀ ದೇಶಕ್ಕೆ ಶಕ್ತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಜ್ಯೋತಿಯನ್ನ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ಹಚ್ಚಿದ್ದೇವೆ. ಅದು ಜಿಲ್ಲೆ ರಾಜ್ಯಾದ್ಯಂತ ವ್ಯಾಪಿಸಲಿದೆ ಎಂದು ಹೇಳಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕಾಂಗ್ರೆಸ್ ಪಕ್ಷದ ಮನೆ ಖಾಲಿಯಾಗಿದೆ ಎಂಬ ಬಿಜೆಪಿಯವರು ಪದೇಪದೇ ಹೇಳುತ್ತಾರೆ. ರಾಜ್ಯದ ವಿವಿಧ ಕ್ಷೇತ್ರಗಳಿಂದ 1310ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಹಾಕಿದ್ದಾರೆ. ಕಾಂಗ್ರೆಸ್‌ ಪಕ್ಷ ಖಾಲಿಯಾಗಿದ್ದರೆ ಇಷ್ಟೊಂದು ಅರ್ಜಿಗಳು ಹೇಗೆ ಬಂದವು ಎಂದು ಪ್ರಶ್ನಿಸಿದರು.
ಬಿದ್ದ ಹನಿ ಹನಿ ರಕ್ತಕ್ಕೂ ನ್ಯಾಯ ಕೊಡಿಸುತ್ತೇವೆಂದು ಪರೇಶ್ ಮೇಸ್ತಾ ಸಾವಿನ ಸಂದರ್ಭದಲ್ಲಿ ಜಿಲ್ಲೆಯ ಸಂಸದರು ಹೇಳಿಕೆ ನೀಡಿದ್ದರು. ಆದರೆ ಎರಡು ಸಾವಿರಕ್ಕೂ ಅಧಿಕ ಮಂದಿ ಯುವಕರ ಮೇಲೆ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ ಬಳಿಕ ಅವರಿಗೆ ನ್ಯಾಯ ಒದಗಿಸಿ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಇಂದಿನ ಪ್ರಮುಖ ಸುದ್ದಿ :-   ಕಾಂಗ್ರೆಸ್ 4ನೇ ಗ್ಯಾರಂಟಿ 'ಯುವ ನಿಧಿ' ಯೋಜನೆ ; ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನಿರುದ್ಯೋಗ ಭತ್ಯೆ ಘೋಷಿಸಿದ ರಾಹುಲ್‌ ಗಾಂಧಿ

21 ಸಾವಿರ ಮತದಾರರನ್ನ ಪಟ್ಟಿಯಿಂದ ಕೈಬಿಟ್ಟಿದ್ದಾರೆ. ನಿನ್ನೆ ಚುನಾವಣಾ ಆಯುಕ್ತರ ಬಳಿ ಹೋಗಿ ದೂರು ನೀಡಿ ನೇರವಾಗಿ ಸಮಾವೇಶಕ್ಕೆ ಬಂದಿದ್ದೇನೆ. ಮತದಾರರು ಹುಷಾರಾಗಿದ್ದು ಮತದಾನವನ್ನ ಸರಿಯಾಗಿ ವಿವೇಚನೆಯಿಂದ ಮಾಡಬೇಕು ಎಂದು ಕರೆ ನೀಡಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಆಪರೇಷನ್ ಕಮಲ ಮಾಡಿ. ಆದರೂ ನಮ್ಮದು ಡಬಲ್ ಎಂಜಿನ್ ಸರ್ಕಾರ ಎಂದು ಹೇಳಿಕೊಳ್ಳುತ್ತಾರೆ. ಜನರಿಗೆ ಉದ್ಯೋಗ ಇಲ್ಲದೆ ಬೇರೆ ಕಡೆ ಗುಳೆ ಹೋಗುತ್ತಿದ್ದಾರೆ. ಆದರೂ ಪ್ರಧಾನಿ ನರೇಂದ್ರ ಮೋದಿ ನಿಮ್ಮ ಆದಾಯ ಡಬಲ್ ಮಾಡುತ್ತೇನೆ ಎಂದು ರೈತರಿಗೆ ಹೇಳುತ್ತಾರೆ ಎಂದು ಆರೋಪಿಸಿದರು.
ಮಾಜಿ ಸಚಿವ ಆರ್‌.ವಿ.ದೇಶಪಾಂಡೆ, ಯು.ಟಿಖಾದರ್‌, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ, ಮುಖಂಡರಾದ ಮಧು ಬಂಗಾರಪ್ಪ, ಮಾಜಿ ಶಾಸಕರಾದ ಶಾರದಾ ಶೆಟ್ಟಿ, ಮಂಕಾಳ ವೈದ್ಯ, ಭಿಮಣ್ಣ ನಾಯ್ಕ, ಶಿವಾನಂದ ಹೆಗಡೆ ಮೊದಲಾದವರಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಹಿಂದುತ್ವದ ಬಗ್ಗೆ ಪೋಸ್ಟ್; ನಟ ಚೇತನ್ ಬಂಧನ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement