ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು, ಶುಕ್ರವಾರ ಖಾಸಗಿ ರೆಸಾರ್ಟ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ನೇತೃತ್ವದಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಶ್ರೀಶೈಲಪ್ಪ ಅವರು ಭಾಗಿಯಾಗಿದ್ದರು. ಸಭೆಯ ನಡುವೆಯೇ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಬಿಜೆಪೆಯಿಂದ ರೋಣ ಮತ್ತು ಗದಗ ಕ್ಷೇತ್ರದಲ್ಲಿ ಶಾಸಕರಾಗಿದ್ದ ಅವರು 2019 ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. 1998ರಲ್ಲಿ ರೋಣ ಕ್ಷೇತ್ರದಿಂದ ಜನತಾ ಪಕ್ಷದ ಶಾಸಕರಾಗಿ ಗೆಲುವು ಸಾಧಿಸಿದ್ದ ಶ್ರೀಶೈಲಪ್ಪ ಬಿದರೂರು, 2008ರಲ್ಲಿ ಬಿಜೆಪಿಯಿಂದ ಗದಗ ಕ್ಷೇತ್ರದಿಂದ ಶಾಸಕರಾಗಿದ್ದರು. 2023ರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರೋಣ ಅಥವಾ ಗದಗ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವರು ಬಯಸಿದ್ದರು. 60 ವರ್ಷದ ಶ್ರೀಶೈಲಪ್ಪ ಬಿದರೂರು ಅವರು ಸಭೆಯಲ್ಲಿ ಭಾಗವಹಿಸಿದ್ದ ವೇಳೆ ಹೃದಯಾಘಾತದಿಂದಾಗಿ ವಾಂತಿ ಮಾಡಿಕೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ.
ಇಂದು ಆಯೋಜನೆಯಾಗಿದ್ದ ಕಾಂಗ್ರೆಸ್ ಸಭೆ ರದ್ದು ಮಾಡಲಾಯಿತು ಹಾಗೂ ಶ್ರದ್ಧಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.
ನಿಮ್ಮ ಕಾಮೆಂಟ್ ಬರೆಯಿರಿ