ತೆಲಂಗಾಣ ಶಾಸಕರ ಆಮಿಷ ಪ್ರಕರಣ: ಬಿಎಲ್‌ ಸಂತೋಷ ವಿಚಾರಣೆಗೆ ತೆಲಂಗಾಣ ಹೈಕೋರ್ಟ್‌ ತಡೆ

ಹೈದರಾಬಾದ್‌: ತೆಲಂಗಾಣದ ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಲ್. ಸಂತೋಷ ಅವರನ್ನು ಸದ್ಯಕ್ಕೆ ಪ್ರಶ್ನಿಸಲಾಗುವುದಿಲ್ಲ ಎಂದು ತೆಲಂಗಾಣ ಹೈಕೋರ್ಟ್ ತಿಳಿಸಿದೆ.
ಬಿ.ಎಲ್‌. ಸಂತೋಷ ಅವರಿಗೆ ನೀಡಲಾದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ಗೆ ಡಿಸೆಂಬರ್ 5 ರವರೆಗೆ ತಡೆಯಾಜ್ಞೆ ನೀಡಿದೆ. ತೆಲಂಗಾಣ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ ಅವರಿಗೆ ನವೆಂಬರ್ 26 ಅಥವಾ ನವೆಂಬರ್ 28 ರಂದು ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್ ನೀಡಿದ ನಂತರ ಅವರು ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅವರು ತನಿಖಾ ತಂಡದ ಮುಂದೆ ಇನ್ನೂ ಹಾಜರಾಗಿಲ್ಲ.
ಸಂತೋಷ ಅವರು ಗುಜರಾತ್‌ ಚುನಾವಣಾ ಸಂಬಂಧಿತ ಕೆಲಸದಲ್ಲಿ ನಿರತರಾಗಿದ್ದು, ನವೆಂಬರ್ 16 ರಂದು ಮೊದಲ ನೋಟಿಸ್ ಸ್ವೀಕರಿಸಲಿಲ್ಲ. ನಂತರ ನ್ಯಾಯಾಲಯವು ಅವರಿಗೆ ಇ-ಮೇಲ್ ಮತ್ತು ವಾಟ್ಸಪ್ ಮೂಲಕ ಕಳುಹಿಸಬಹುದು ಎಂದು ಹೇಳಿತು. ಆಗ ನವೆಂಬರ್ 26 ಅಥವಾ ನವೆಂಬರ್ 28 ರಂದು ವಿಚಾರಣೆಗಾಗಿ ಎಸ್‌ಐಟಿ ಮುಂದೆ ಹಾಜರಾಗುವಂತೆ ಮತ್ತೊಂದು ನೋಟಿಸ್‌ ನೀಡಲಾಯಿತು. ಈಗ ಅದಕ್ಕೆ ತೆಲಂಗಾಣ ಹೈಕೋರ್ಟ್‌ ಡಿಸೆಂಬರ್ 5ರ ವರೆಗೆ ತಡೆ ನೀಡಿದೆ.

ಪ್ರಮುಖ ಸುದ್ದಿ :-   ಇದು 22 ವರ್ಷಗಳ ಹಿಂದೆ ನರೇಂದ್ರ ಮೋದಿಯ ರಾಜಕೀಯ ಜೀವನದ ದಿಕ್ಕನ್ನೇ ಬದಲಾಯಿಸಿದ ದಿನದ ವೀಡಿಯೊ | ವೀಕ್ಷಿಸಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement