ಧಾರವಾಡ: ಕ್ಯಾಂಪಸ್ ಸಂದರ್ಶನ-ಬಿಕಾಂ, ಬಿಬಿಎ, ಎಂಕಾಂ, ಎಂಬಿಎ ಉತ್ತೀರ್ಣರು ಪಾಲ್ಗೊಳ್ಳಬಹುದು

posted in: ರಾಜ್ಯ | 0

ಧಾರವಾಡ: ಡಾ. ಡಿ ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ನವೆಂಬರ್‌ 28ರಂದು ಬೆಳಿಗ್ಗೆ 9:30 ಕ್ಕೆ ಶಕ್ತಿ ಇನ್ಸ್ಟಿಟ್ಯೂಟ್ ಆಫ್ ಫೈನಾನ್ಸಿಯಲ್ ಮಾರ್ಕೆಟ್‌ ವತಿಯಿಂದ ಗ್ಲೋಬಲ್ ಬ್ಯಾಂಕ್‌ಗಳಿಗೆ ವಿವಿಧ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ.
2020, 2021, 2022ರಲ್ಲಿ ಬಿ.ಕಾಂ, ಬಿ.ಬಿ.ಎ, ಎಂ.ಕಾಂ, ಎಂ.ಬಿ.ಎ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೆಟಾ, ಅಂಕಪಟ್ಟಿ ನಕಲು ಪ್ರತಿ, ಆಧಾರ ಕಾರ್ಡ್‌ ನಕಲು ಪ್ರತಿ, ಪಾಸ್‌ಪೋರ್ಟ್‌ ಸೈಜ್ ಫೋಟೊದೊಂದಿಗೆ ಹಾಜರಾಗಬೇಕು. 9686199524ಕ್ಕೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು 0836-2462202ಕ್ಕೆ ಕರೆ ಮಾಡಿ ಪಡೆದುಕೊಳ್ಳಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement