ಕಿತ್ತೂರು ತಹಶೀಲ್ದಾರ ಲೋಕಾಯುಕ್ತ ಬಲೆಗೆ

ಬೆಳಗಾವಿ: ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಜಿಲ್ಲೆಯ ಕಿತ್ತೂರು ತಹಶೀಲ್ದಾರ ಮತ್ತು ಕೇಸ್ ವರ್ಕರ್ 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಿತ್ತೂರು ತಹಶೀಲ್ದಾರ ಸೋಮಲಿಂಗಪ್ಪ ಹಲಗಿ ಹಾಗೂ ಕೇಸ್ ವರ್ಕರ್ ಪ್ರಸನ್ನ ಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಕಿತ್ತೂರು ತಾಲೂಕಿನ ಖೊದಾನಪುರ ಗ್ರಾಮದ ಬಾಪುಸಾಹೇಬ ಇನಾಮದಾರ ಎಂಬವರು ತಮ್ಮ 10 ಎಕರೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಿತ್ತೂರು ತಹಶೀಲ್ದಾರ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ.
ಈ ಬಗ್ಗೆ ಬಾಪುಸಾಹೇಬ ಅವರ ಪುತ್ರ ರಾಜೇಂದ್ರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ಕಿತ್ತೂರು ತಹಶೀಲ್ದಾರ ಮನೆಯಲ್ಲಿಯೇ ಜಮೀನಿನ ಖಾತೆ ಬದಲಾವಣೆ ಮಾಡಲು ನಿನ್ನೆ (ನವೆಂಬರ್‌ 25) 2 ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತದವರು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಯಶೋಧಾ ವಂಟಗೋಡೆ ನೇತೃತ್ವದ ಅಧಿಕಾರಿಗಳು ಮನೆಯಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು 10 ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ದಾಖಲೆ ಪತ್ರಗಳನ್ನು ಜಪ್ತಿ ಮಾಡಿದ್ದಾರೆ.
ಎರಡು ಲಕ್ಷ ಹಣ ಮತ್ತು ಶ್ಯೂರಿಟಿಗಾಗಿ 20 ಲಕ್ಷ ಮೌಲ್ಯದ ಖಾಲಿ ಚೆಕ್ ಅನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಬೆಳಗಾವಿ ಎಸ್‍ಪಿ ಯಶೋಧಾ ವಂಟಗೂಡಿ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯಾಗಿ ಅಪೂರ್ಣ ಹುಲಗೂರ ತಂಡದ ಸಿಬ್ಬಂದಿ ಭಾಗಿಯಾಗಿದ್ದಾರೆ

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement