ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ…!

posted in: ರಾಜ್ಯ | 0

ಬೆಳಗಾವಿ : ಸದಾ ಗಡಿ ವಿವಾದ ಕೆದಕುವ ಮಹಾರಾಷ್ಟ್ರಕ್ಕೆ ಈ ಬಾರಿ ತುಸು ಹಿನ್ನಡೆಯಾಗಿದೆ. ಯಾಕೆಂದರೆ ಆ ರಾಜ್ಯದಲ್ಲಿರುವ
ಕನ್ನಡಿಗರೇ ಸ್ವತಃ ತಮ್ಮನ್ನು ಕರ್ನಾಟಕಕ್ಕೆ ಸೇರಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಬೆಳವಣಿಗೆ ನೋಡಿ ಇದೀಗ ಮಹಾರಾಷ್ಟ್ರವಾದಿಗಳು ಬೆಚ್ಚಿ ಬಿದ್ದಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ, ಕೊಲ್ಲಾಪುರ, ಸಾಂಗ್ಲಿ, ಉಸ್ಮಾನಬಾದ್, ಲಾತೂರ್ ಜಿಲ್ಲೆಗಳನ್ನು ಹೊಸ ನಕಾಶೆಯಲ್ಲಿ ಕರ್ನಾಟಕದ ಜೊತೆ ಸೇರಿಸಲಾಗಿದೆ. ಇವೆಲ್ಲವೂ ಕರ್ನಾಟಕಕ್ಕೆ ಹೊಂದಿಕೊಂಡಿರುವ ಕನ್ನಡ ಭಾಷಿಕರ ಬಾಹುಳ್ಯದ ಮಹಾರಾಷ್ಟ್ರದ ಪ್ರದೇಶಗಳು. ಹೀಗಾಗಿ ತಮ್ಮ ಪ್ರದೇಶಗಳನ್ನು ಕರ್ನಾಟಕದಲ್ಲಿ ವಿಲೀನ ಮಾಡುವಂತೆ ಗಡಿ ಕನ್ನಡಿಗರು ಒತ್ತಾಯಿಸಿದ್ದಾರೆ.
ಕನ್ನಡ ಭಾಷಿಕರು ಹೆಚ್ಚು ಸಂಖ್ಯೆಯಲ್ಲಿ ಇರುವ ಜತ್ ತಾಲೂಕು ನೀರಾವರಿ ಸೌಲಭ್ಯದಿಂದ ವಂಚಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಜತ್ ತಾಲೂಕನ್ನು ಕರ್ನಾಟಕದಲ್ಲಿ ಸೇರ್ಪಡೆ ಮಾಡುವಂತೆ ತುಸು ಬಲವಾಗಿಯೇ ಒತ್ತಾಯಪಡಿಸಿದ್ದಾರೆ. ಈ ಎಲ್ಲಾ ಬೆಳವಣಿಗೆ ಈ ಸಲ ಮಹಾರಾಷ್ಟ್ರದ ಪಾಲಿಗೆ ಭಾರಿ ಮುಖಭಂಗಕ್ಕೆ ಕಾರಣವಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಕಾರ್ಯಕ್ರಮದ ವೇಳೆ ಕುಸಿದುಬಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement