ಮಂಗಳೂರು: ವ್ಯಕ್ತಿಯೋರ್ವ ತನಗೆ ಲೈಂಗಿಕ ಕಿರುಕುಳ ನೀಡಿ ಅನ್ಯ ಧರ್ಮಕ್ಕೆ ಮತಾಂತರಗೊಳಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬರು ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ನಡೆಸಿ ಆಯೇಷಾ ಎಂದು ಹೆಸರು ಬದಲಿಸಲಾಗಿತ್ತು. ಮತಾಂತರದ ಬಳಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಮೊಬೈಲ್ ಶಾಪ್ ಇಟ್ಟುಕೊಂಡಿದ್ದ ಖಲೀಲ್ ಎಂಬಾತ ಪರಿಚಯವಾಗಿದ್ದು, ನಾನು ಆತನ ಮೊಬೈಲ್ ಶಾಪ್‌ನಲ್ಲೇ ಮೊಬೈಲ್ ರಿಚಾರ್ಜ್ ಮಾಡುತ್ತಿದ್ದೆ. 2021ರ ಜನವರಿ 14ರಂದು ಖಲೀಲ್ ಒಳ್ಳೆಯ ಕೆಲಸ ಮತ್ತು ಹಣ ಕೊಡುವುದಾಗಿ ಆಮಿಷವೊಡ್ಡಿ ಪುಸಲಾಯಿಸಿ ಆತನ ಕುಟುಂಬದ ಮನೆಯಾದ ಕಲ್ಲಾಪುಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಮಹಿಳೆಯರಿಗೆ ಪರಿಚಯಿಸಿದ. ನಂತರ ಅವರು ಕುರಾನ್ ಓದಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದರು. ನಂತರ ಅವರು ನನಗೆ ಲೈಂಗಿಕ ಕಿರುಕುಳ ನೀಡಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹಿಂದೂ ಹೆಸರನ್ನು ಆಯಿಷಾ ಎಂದು ಬದಲಾಯಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೆಲಸದಿಂದ ತೆಗೆಸುವುದಾಗಿ ಬೆದರಿಕೆ ಹಾಕಿದ್ದಾನೆ. ಬುರ್ಖಾ ಧರಿಸುವಂತೆ ಒತ್ತಾಯಿಸಿ ಬುರ್ಖಾ ತಂದು ಕೊಟ್ಟಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ