15 ವರ್ಷ ಪೂರೈಸಿದ ವಾಹನಗಳು ಗುಜರಿಗೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾಗಪುರ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಗೆ ಸೇರಿದ 15 ವರ್ಷ ಹಳೆಯ ವಾಹನಗಳನ್ನು ಗುಜರಿಗೆ ಹಾಕಲಾಗುತ್ತದೆ ಎಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದರು.
ನಗರದಲ್ಲಿ ನಡೆದ ಕೃಷಿ-ದೂರದೃಷ್ಟಿ ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 15 ವರ್ಷ ಪೂರೈಸಿದ ಹಾಗೂ ಕೇಂದ್ರ ಸರ್ಕಾರಕ್ಕೆ ಸೇರಿದ ಎಲ್ಲ ವಾಹನಗಳನ್ನು ಗುಜರಿಗೆ ಹಾಕುವುದಕ್ಕೆ ಸಂಬಂಧಿಸಿದ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಸಹಿ ಹಾಕಲಾಗಿದೆ. ರಾಜ್ಯ ಸರ್ಕಾರಗಳಿಗೂ ಈ ಸ್ಕ್ರಾಪಿಂಗ್ ನೀತಿಯ ಸುತ್ತೋಲೆ ರವಾನೆ ಮಾಡಲಾಗಿದೆ. ರಾಜ್ಯಮಟ್ಟದಲ್ಲಿ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇಂಡಿಯನ್ ಆಯಿಲ್‌ನ ಎರಡು ಘಟಕಗಳು ಪಾಣಿಪತ್‌ನಲ್ಲಿ ಶೀಘ್ರ ಆರಂಭವಾಗಲಿದೆ. ಒಂದರಲ್ಲಿ ಪ್ರತಿದಿನ ಒಂದು ಲಕ್ಷ ಟನ್‌ ಲೀಟರ್‌ ಎಥೆನಾಲ್‌ ಉತ್ಪಾದಿಸಿದರೆ, ಮತ್ತೊಂದರಲ್ಲಿ ಭತ್ತದ ಹುಲ್ಲು ಬಳಸಿ ಪ್ರತಿನಿತ್ಯ ಜೈವಿಕ -ಬಿಟುಮೆನ್ ಅನ್ನು 150 ಟನ್‌ ಉತ್ಪಾದಿಸಲಾಗುತ್ತದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ದೇಶದ ವಿವಿಧೆಡೆ ಅಕ್ಕಿ ಉತ್ಪಾದಿಸುವ ಭಾಗಗಳಲ್ಲಿ ಭತ್ತದ ಹುಲ್ಲು ಸುಡುವುದರಿಂದ ಮಾಲಿನ್ಯ ಉಂಟಾಗುತ್ತದೆ. ಈಗ ಎಥೆನಾಲ್, ಬಯೊ-ಬಿಟುಮೆನ್ ಉತ್ಪಾದಿಸಲು ಬಳಸುವುದರಿಂದ ಮಾಲಿನ್ಯ ತಡೆಗಟ್ಟಬಹುದು ಎಂದು ಅವರು ಹೇಳಬಹುದು.
ದೇಶದಲ್ಲಿ 80 ಲಕ್ಷ ಟನ್‌ ಬಯೊ-ಬಿಟುಮೆನ್ ಅಗತ್ಯವಿದೆ. ಪ್ರಸ್ತುತ 50 ಲಕ್ಷ ಟನ್‌ ಉತ್ಪಾದಿಸಲಾಗುತ್ತಿದೆ. ಉಳಿದ 25 ಲಕ್ಷ ಟನ್‌ ಆಮದು ಮಾಡಿಕೊಳ್ಳಲಾಗುತ್ತಿದೆ. ಅದಕ್ಕಾಗಿ ಸರ್ಕಾರ ಮಾಲಿನ್ಯ ನಿಯಂತ್ರಣಕ್ಕೆ ಹೊಸ ಯೋಜನೆ ರೂಪಿಸಿದೆ ಎಂದು ಅವರು ಹೇಳಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಿದ್ದ, ಭಾರತದಲ್ಲಿ ದಾಳಿ ನಡೆಸುವುದನ್ನು ಸಂಘಟಿಸಿದ್ದ : ವರದಿಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement