ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ 75% ಭಾರತೀಯರಿಗೆ ಅನಿಯಂತ್ರಿತ ಬಿಪಿ ಇದೆ: ಲ್ಯಾನ್ಸೆಟ್ ಅಧ್ಯಯನ

ನವದೆಹಲಿ: ದಿ ಲ್ಯಾನ್ಸೆಟ್ ರೀಜನಲ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಭಾರತದಲ್ಲಿ ನಾಲ್ಕನೇ ಒಂದು ಭಾಗಕ್ಕಿಂತ ಕಡಿಮೆ ಪ್ರಮಾಣದ ಅಧಿಕ ರಕ್ತದೊತ್ತಡ ರೋಗಿಗಳು ಮಾತ್ರ ತಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ. ಅಧಿಕ ರಕ್ತದೊತ್ತಡವು ಹೃದಯರಕ್ತನಾಳದ ಕಾಯಿಲೆಗಳಿಗೆ (CVD) ಪ್ರಮುಖ ಮಾರ್ಪಡಿಸಬಹುದಾದ ಅಪಾಯಕಾರಿ ಅಂಶವಾಗಿದೆ, ಇದು ಅಕಾಲಿಕ ಮರಣ ಮತ್ತು ಅನಾರೋಗ್ಯದ ಗಮನಾರ್ಹ ಕೊಡುಗೆಗಳಲ್ಲಿ ಒಂದಾಗಿದೆ. ನವದೆಹಲಿಯ … Continued

ಮಹಾರಾಷ್ಟ್ರದಲ್ಲಿ ಮತ್ತೆ ಧ್ವನಿಸಿದ ಕರ್ನಾಟಕ ಸೇರ್ಪಡೆ ಕೂಗು

ಜತ್ :ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಸಿದ್ದನಾಥ ಗ್ರಾಮದ ಕನ್ನಡ ಭಾಷಿಕರು ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ ಧಿಕ್ಕಾರವಿರಲಿ, ಕರ್ನಾಟಕಕ್ಕೆ ಜಯವಾಗಲಿ ಎಂಬ ಘೋಷಣೆ ಕೂಗಿದರು. ಮಹಾರಾಷ್ಟ್ರ ರಾಜ್ಯದ ಕನ್ನಡ ಭಾಷಿಕರು ಇರುವ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ, ರಸ್ತೆ, ಸಾರಿಗೆ, ನೀರಾವರಿ ಸೇರಿದಂತೆ … Continued

ಮಹಿಳೆಯರ ಬಗ್ಗೆ ತಮ್ಮ ಹೇಳಿಕೆಗೆ ಬಾಬಾ ರಾಮದೇವ ಕ್ಷಮೆಯಾಚನೆ

ನವದೆಹಲಿ: ಮಹಿಳೆಯರ ಬಗ್ಗೆ ತಮ್ಮ ಕಾಮೆಂಟ್‌ಗಳು ಕೋಲಾಹಲಕ್ಕೆ ಕಾರಣವಾದ ನಂತ ಯೋಗ ಗುರು, ಬಾಬಾ ರಾಮದೇವ ಅವರು ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ. ರಾಮದೇವ ಅವರಿಗೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ಶುಕ್ರವಾರ ಇಮೇಲ್ ಕಳುಹಿಸಿದ್ದು, ಶುಕ್ರವಾರದ ತಮ್ಮ ಹೇಳಿಕೆಗಳಿಗೆ 72 ಗಂಟೆಗಳ ಒಳಗೆ … Continued

ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಮತಾಂತರಗೊಳ್ಳುವ ಮೂಲಭೂತ ಹಕ್ಕನ್ನು ಒಳಗೊಂಡಿಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಇತರ ಜನರನ್ನು ನಿರ್ದಿಷ್ಟ ಧರ್ಮಕ್ಕೆ ಪರಿವರ್ತಿಸುವ ಮೂಲಭೂತ ಹಕ್ಕನ್ನು ಒಳಗೊಂಡಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದು ಸಮಸ್ಯೆಯ ಗಂಭೀರತೆಯ ಅರಿವಾಗಿದೆ ಎಂದು ಕೇಂದ್ರವು ತನ್ನ ಅಫಿಡವಿಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ದೇಶದಾದ್ಯಂತ ಮೋಸದ ಧಾರ್ಮಿಕ ಮತಾಂತರವು ವ್ಯಾಪಕವಾಗಿದೆ ಎಂದು ಹೇಳಿದೆ. ಅಂತಹ ಮತಾಂತರದ … Continued

ಓಲಾ, ಉಬರ್‌ ಆಟೋ ಸರ್ವಿಸ್‌ : ಶೇ.5 ಸೇವಾ ಶುಲ್ಕ, ಜಿಎಸ್‌ಟಿ ಸೇರಿಸಿ ಪ್ರಯಾಣ ದರ ನಿಗದಿ ಕುರಿತು ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ. 5 ಜಿಎಸ್‌ಟಿ ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸೋಮವಾರ ತಿಳಿಸಿದೆ. ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂಬ ರಾಜ್ಯ ಸರ್ಕಾರದ … Continued

ಅಂಜನಾದ್ರಿಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಡಿ: ಹಿಂಜಾವೇ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲು ಹಿಂದೂ ಧರ್ಮದವರನ್ನು ಹೊರತುಪಡಿಸಿ ಬೇರೆ ಯಾರಿಗೂ ವ್ಯಾಪಾರ ನಡೆಸಲು ಅವಕಾಶ ಕೊಡಬಾರದು ಎಂದು ಹಿಂದೂ ಜಾಗರಣ ವೇದಿಕೆಯು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದೆ. ಅಲ್ಲದೆ ಈ ಕುರಿತು ಜಾಗರಣಾ ವೇದಿಕೆ ಅಂಜನಾದ್ರಿಗೆ ಹೋಗುವ ಮಾರ್ಗದಲ್ಲಿ ಪೋಸ್ಟರ್‌ಗಳನ್ನು ಹಾಕಿದೆ. ಅಂಜನಾದ್ರಿ ಪರ್ವತ ಹಿಂದೂಗಳ ಪವಿತ್ರ … Continued

ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆ

ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಅವರು ಇಂದು ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸಚ್ಚಿದಾನಂದ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವರಲ್ಲದೆ ನಾಗಮಂಗಲ ರವಿ, ಶ್ರೀ ರಂಗ ಪಟ್ಟಣ ಲಿಂಗಾರಾಜು ಬಿಜೆಪಿಗೆ ಸೇರ್ಪಡೆಯಾದರು ಈ ವೇಳೆ ಪಕ್ಷದ ಬಾವುಟ ಹಾಗೂ ಶಾಲು ಹೊದಿಸಿ ಸಚಿವರಾದ ಸಿ.ಎನ್.ಅಶ್ವತ್ಥ … Continued

ಗುಜರಾತ್ 2ನೇ ಹಂತದ ಚುನಾವಣೆ: ಎಎಪಿ, ಕಾಂಗ್ರೆಸ್‌ನ 30%ಕ್ಕಿಂತ ಹೆಚ್ಚು ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣ- ಎಡಿಆರ್ ಡೇಟಾ ಬಹಿರಂಗ

ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಸ್ಪರ್ಧಿಸುತ್ತಿರುವ ಶೇಕಡಾ 30 ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಗಳು ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಹೊಸ ವರದಿ ಬಹಿರಂಗಪಡಿಸಿದೆ. ಗುಜರಾತ್ ಎಲೆಕ್ಷನ್ ವಾಚ್ ಮತ್ತು ಎಡಿಆರ್ 93 ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಸ್ಪರ್ಧಿಸುತ್ತಿರುವ ಎಲ್ಲಾ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ನಾಳೆ ದೆಹಲಿಯಲ್ಲಿ ನ್ಯಾಯವಾದಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಬೆಂಗಳೂರು: ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಮರಕ್ಕೆ ಸಿದ್ಧವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಸೋಮವಾರ ದೆಹಲಿಗೆ ತೆರಳಿ ನಾಳೆ ಸರ್ವೋಚ್ಛ ನ್ಯಾಯಾಲಯದಲ್ಲಿಕರ್ನಾಟಕದ ಪರ ವಾದ ಮಂಡಿಸಲಿರುವ ವಕೀಲರ ಜೊತೆ ಸಭೆ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಬೊಮ್ಮಾಯಿ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನಿನ ಹೋರಾಟಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ. … Continued

ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯತ್ತಿದ್ದ ಪೊಲೀಸ್​​ ವ್ಯಾನ್​​ ಮೇಲೆ ಮಾರಕಾಸ್ತ್ರ ಹಿಡಿದು ದಾಳಿ

ನವದೆಹಲಿ: ಲಿವ್‌ ಇನ್‌ ಗೆಳತಿ ಶ್ರದ್ಧಾ ವಾಕರ್‌ ಅವರನ್ನು ಕೊಂದ ಆರೋಪಿ ಅಫ್ತಾಬ್ ಪೂನಾವಾಲಾ ಪ್ರಯಾಣಿಸುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ಸೋಮವಾರ ದೆಹಲಿಯಲ್ಲಿ ದಾಳಿ ನಡೆಸಲಾಗಿದೆ. ದೆಹಲಿಯ ಎಫ್‌ಎಸ್‌ಎಲ್ ಕಚೇರಿಯ ಹೊರಗೆ ಹಿಂದೂ ಸೇನೆಯೆಂದು ಹೇಳಿಕೊಂಡ ಕತ್ತಿಗಳನ್ನು ಹೊತ್ತಿದ್ದ ಕನಿಷ್ಠ ಇಬ್ಬರು ವ್ಯಕ್ತಿಗಳು ವ್ಯಾನ್ ಮೇಲೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಇಬ್ಬರನ್ನು ವಶಕ್ಕೆ … Continued