ಅಂಜನಾದ್ರಿಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಡಿ: ಹಿಂಜಾವೇ

posted in: ರಾಜ್ಯ | 0

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲು ಹಿಂದೂ ಧರ್ಮದವರನ್ನು ಹೊರತುಪಡಿಸಿ ಬೇರೆ ಯಾರಿಗೂ ವ್ಯಾಪಾರ ನಡೆಸಲು ಅವಕಾಶ ಕೊಡಬಾರದು ಎಂದು ಹಿಂದೂ ಜಾಗರಣ ವೇದಿಕೆಯು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದೆ. ಅಲ್ಲದೆ ಈ ಕುರಿತು ಜಾಗರಣಾ ವೇದಿಕೆ ಅಂಜನಾದ್ರಿಗೆ ಹೋಗುವ ಮಾರ್ಗದಲ್ಲಿ ಪೋಸ್ಟರ್‌ಗಳನ್ನು ಹಾಕಿದೆ.
ಅಂಜನಾದ್ರಿ ಪರ್ವತ ಹಿಂದೂಗಳ ಪವಿತ್ರ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದ್ದು, ಡಿಸೆಂಬರ್‌ ಮೊದಲ ವಾರದಲ್ಲಿ ಹುನಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯುತ್ತದೆ, ಬೇರೆ ಬೇರೆ ರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ದೇಶ ಹಾಗೂ ವಿದೇಶಗಳಿಂದ ಭಕ್ತರು ದರ್ಶನ ಪಡೆಯಲು ಆಗಮಿತ್ತಾರೆ. ಈ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸೇರಿದೆ. ಕಾಯಿ, ಕರ್ಪೂರ, ಹಣ್ಣುಗಳು ಸೇರಿದಂತೆ ಅನೇಕ ಪೂಜಾ ಸಾಮಗ್ರಿಗಳನ್ನು ಮತ್ತು ಹೋಟೆಲ್‌ಗಳು ಅಲ್ಲಿವೆ. ಇವುಗಳಲ್ಲಿ ವ್ಯಾಪಾರ ನಡೆಸಲು ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು. ಇಂಥ ಪವಿತ್ರ ಕ್ಷೇತ್ರದಲ್ಲಿ ಅನ್ಯ ಧರ್ಮದವರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟರೆ ಹೋರಾಟ ಮಾಡಲಾಗುವುದು ಎಂದು ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement