ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ನಾಳೆ ದೆಹಲಿಯಲ್ಲಿ ನ್ಯಾಯವಾದಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಬೆಂಗಳೂರು: ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಮರಕ್ಕೆ ಸಿದ್ಧವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಸೋಮವಾರ ದೆಹಲಿಗೆ ತೆರಳಿ ನಾಳೆ ಸರ್ವೋಚ್ಛ ನ್ಯಾಯಾಲಯದಲ್ಲಿಕರ್ನಾಟಕದ ಪರ ವಾದ ಮಂಡಿಸಲಿರುವ ವಕೀಲರ ಜೊತೆ ಸಭೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಬೊಮ್ಮಾಯಿ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನಿನ ಹೋರಾಟಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ. ನವೆಂಬರ್‌ 30 ರಂದು ಸುಪ್ರೀಂಕೋರ್ಟ್‌ನಲ್ಲಿ ಗಡಿ ವಿಚಾರವು ವಿಚಾರಣೆಗೆ ಬರಲಿದ್ದು, ಮಂಗಳವಾರ ದೆಹಲಿಯಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ರಾಜ್ಯದ ಪರ ವಾದ ಮಂಡಿಸಲಿರುವ ಮಾಜಿ ಸಾಲಿಸಿಟರ್ ಜನರಲ್ ಮುಕುಲ್ ರೋಹಟಗಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.
ಭಾನುವಾರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗಡಿ ಆಯೋಗದ ಅಧ್ಯಕ್ಷರಾಗಿರುವ ನಿವೃತ್ತ ನ್ಯಾ. ಶಿವರಾಜ್ ಪಾಟೀಲ, ರಾಜ್ಯದ ಅಡ್ವೋಕೆಟ್ ಜನರಲ್ ಪ್ರಭುಲಿಂಗ ನಾವದಗಿ, ಖ್ಯಾತ ವಕೀಲ ಉದಯ್ ಹೊಳ್ಳ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದರು. ನಾಳೆ ದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರೊಡ ಚರ್ಚೆ ನಡೆಸಲಿದ್ದಾರೆ.

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement