ಭಾರತ ಜೋಡೋ ಯಾತ್ರೆ ವೇಳೆ ನೂಕು ನುಗ್ಗಲು: ಕೆ.ಸಿ ವೇಣುಗೋಪಾಲಗೆ ಗಾಯ

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ (KC Venugopal) ನೂಕಾಟದ ವೇಳೆ ಅವರು ಕೆಳಗೆ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತದಿಂದ ಕೆ.ಸಿ ವೇಣುಗೋಪಾಲ್ ಅವರ ಕೈ ಮತ್ತು ಮೊಣಕಾಲಿನ ಮೇಲೆ ಗಾಯಗಳಾಗಿದೆ. ಅವರಿಗೆ ಭಾರತ ಜೋಡೋ ಯಾತ್ರೆಯ ಶಿಬಿರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು.
ಕಾಲ್ತುಳಿತದಿಂದ ವೇಣುಗೋಪಾಲ್ ಅವರ ಕೈ ಮತ್ತು ಮೊಣಕಾಲಿನ ಮೇಲೆ ಗಾಯಗಳಾಗಿದ್ದು, ಯಾತ್ರಾ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು.
ವರದಿಗಳ ಪ್ರಕಾರ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಉಂಟಾದ ನೂಕುನುಗ್ಗಲನ್ನು ನಿಯಂತ್ರಿಸುವಲ್ಲಿ ಪೊಲೀಸ್ ಸಿಬ್ಬಂದಿ ವಿಫಲವಾಯಿತು. ಇದರಿಂದ ಉಂಟಾದ ಕಾಲ್ತುಳಿತದಲ್ಲಿ ವೇಣುಗೋಪಾಲ ಗಾಯಗೊಂಡರು. ಆದಾಗ್ಯೂ, ಅವರು ಶೀಘ್ರದಲ್ಲೇ ಪಾದಯಾತ್ರೆಯನ್ನು ಸೇರಿಕೊಂಡರು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement