ಮಹಿಳೆಯರಿಗಾಗಿ ಧಾರವಾಡ ಜೆಎಸ್ಎಸ್‌ನಲ್ಲಿ ಉದ್ಯೋಗ ಮೇಳ

posted in: ರಾಜ್ಯ | 0

ಧಾರವಾಡ: ಇಲ್ಲಿನ ಜೆ.ಎಸ್.ಎಸ್ ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳವನ್ನು ಡಿಸೆಂಬರ್ 18ರ ಭಾನುವಾರ ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ (ಜೆ.ಎಸ್.ಎಸ್ ) ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.
ಧಾರವಾಡದ ರ‍್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಈ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇತರೆ ಟೇಲರಿಂಗ್, ಕಸೂತಿ ಕೌಶಲ್ಯ ಹೊಂದಿದ ಮಹಿಳೆಯರು, ವಿದ್ಯಾರ್ಥಿನಿಯರು ಭಾಗವಹಿಸಬಹುದು ಎಂದು ತಿಳಿಸಲಾಗಿದೆ.
ಅಲ್ಲದೆ ಹೆಲ್ಪರ್, ಕ್ಲೀನರ್ ಮತ್ತು ಹೌಸ್ ಕೀಪಿಂಗ್ ಉದ್ಯೋಗಗಳಿಗೆ ನೇಮಕಾತಿ ನಡೆಯಲಿದೆ. ಮಹಿಳಾ ಉದ್ಯೋಗದಾತರು ಸಹ ತಮ್ಮಲ್ಲಿ ಮಹಿಳೆಯರಿಗಾಗಿ ಯಾವುದಾದರೂ ಉದ್ಯೋಗಗಳು ಖಾಲಿ ಇದ್ದಲ್ಲಿ ಈ ಮೇಳದಲ್ಲಿ ಭಾಗವಹಿಸಬಹುದು. ಭಾಗವಹಿಸಲು ಇಚ್ಛಿಸುವ ಕಂಪನಿ ಪ್ರತಿನಿಧಿಗಳು ಹಾಗೂ ಮಹಿಳಾ ಅಭ್ಯರ್ಥಿಗಳು ಡಿಸೆಂಬರ್ 14ರ ಒಳಗಾಗಿ ಬೆಳಿಗ್ಗೆ 10:30 ರಿಂದ ಸಂಜೆ 5:30ರ ಒಳಗೆ 0836-3566952/8073831784ಕ್ಕೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಖಾಸಗಿ ಬಸ್-ಬೈಕ್‌ ಡಿಕ್ಕಿ: ತಂದೆ-ಮಗಳು ಸಾವು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement