ಮಹಾರಾಷ್ಟ್ರದ ಇಬ್ಬರು ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ : ಸಿಎಂ ಬೊಮ್ಮಾಯಿಗೆ ಬೆಳಗಾವಿಯ ಕನ್ನಡಪರ ಹೋರಾಟಗಾರ ಬರೆದ ಪತ್ರದಲ್ಲಿ ಏನಿದೆ ?

posted in: ರಾಜ್ಯ | 0

ಬೆಳಗಾವಿ : ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ
ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ ಹಾಗೂ ದಕ್ಷಿಣ ಸೋಲ್ಲಾಪುರ ಪ್ರದೇಶಗಳಿಗೆ ಕಳುಹಿಸಬೇಕು ಎಂದು ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣವು ಸುಪ್ರೀಂಕೋರ್ಟ್‌ನಲ್ಲಿ ಅಂತಿಮ ವಿಚಾರಣೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಭಾಗದಲ್ಲಿ ಸೌಹಾರ್ದ ವಾತಾವರಣವನ್ನು ಹದಗೆಡಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಹಾರಾಷ್ಟ್ರ ಬೆಂಬಲಿತ ಶಕ್ತಿಗಳು ನಡೆಸುತ್ತಿವೆ. ಇದರ ಭಾಗವಾಗಿ ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಹಾಗೂ ಶಂಭುರಾಜೆ ದೇಸಾಯಿ ಅವರು ಇದೇ ಶನಿವಾರ ಡಿಸೆಂಬರ್ 3 ರಂದು ಬೆಳಗಾವಿಗೆ ಬರಲಿದ್ದು ಇಲ್ಲಿಯ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆಯ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ. ಇಂತಹ ವಾತಾವರಣದಲ್ಲಿ ಸಚಿವದ್ವಯರು ಬೆಳಗಾವಿಗೆ ಆಗಮಿಸುತ್ತಿರುವುದು ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಖಾಸಗಿ ಬಸ್-ಬೈಕ್‌ ಡಿಕ್ಕಿ: ತಂದೆ-ಮಗಳು ಸಾವು

ಮಹಾರಾಷ್ಟ್ರದ ಅಚ್ಚ ಕನ್ನಡ ಪ್ರದೇಶಗಳಾದ ಜತ್ತ, ಅಕ್ಕಲಕೋಟ, ದಕ್ಷಿಣ ಸೊಲ್ಲಾಪುರ ಮತ್ತು ಪಂಢರಪುರ ಕನ್ನಡಿಗರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಹಳೆ ಊದಿದ್ದು ಕರ್ನಾಟಕಕ್ಕೆ ಸೇರುವ ತಮ್ಮ ಪ್ರಬಲವಾದ ಇಚ್ಛೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ ಕರ್ನಾಟಕ ಸರ್ಕಾರ ಎಲ್ಲ ರೀತಿಯ ಬೆಂಬಲ ನೀಡಬೇಕು. ನೈತಿಕ ಸ್ಥೈರ್ಯ ತುಂಬಬೇಕು. ಈ ದಿಸೆಯತ್ತ ತಾವು ಈ ಕೂಡಲೇ ಇಬ್ಬರು ಹಿರಿಯ ಸಚಿವರನ್ನು ಆ ಪ್ರದೇಶಗಳ ಕನ್ನಡಿಗರ ಭೇಟಿಗೆ ಹಾಗೂ ಚರ್ಚೆಗಾಗಿ ಕಳುಹಿಸಬೇಕು. ಇಂತಹ ಕ್ರಮವು ಮಾತ್ರ ಮಹಾರಾಷ್ಟ್ರಕ್ಕೆ ತಕ್ಕ ಉತ್ತರವಾದೀತು ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದ ವೇಳೆ ಭಾಷಾ ಸೌಹಾರ್ದವನ್ನು ಹದಗೆಡಿಸುವ ಪ್ರಯತ್ನಗಳು ನಡೆಯುತ್ತಲಿವೆ. ಆದ್ದರಿಂದ ತಾವು ಸಾಧ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಳ್ಳಬೇಕೆಂದು ಎಂದು ಅಶೋಕ ಚಂದರಗಿ ಅವರು ಮನವಿ ಮಾಡಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಕನ್ನಡದ ಹಿರಿಯ ನಟ ಮನದೀಪ್ ರಾಯ್ ನಿಧನ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement