ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು, ಮಂಗಳವಾರ ಸ್ವಲ್ಪ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕೆಲವು ಜಿಲ್ಲೆಗಳು, ತಮಿಳುನಾಡು, ಪುದುಚೇರಿ ಹಾಗೂ ಆಂದ್ರಪ್ರದೇಶದ ಕರಾವಳಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಚಂಡಮಾರುತದ ಪರಿಚಲನೆ ಇರುವುದರಿಂದ ಈಶಾನ್ಯ ಮಾನ್ಸೂನ್ ಮಾರುತದಿಂದ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ