ಅಂಜನಾದ್ರಿ ಬೆಟ್ಟದಲ್ಲಿ ಹಾಕಿದ್ದ ಬ್ಯಾನರ್ ತೆರವುಗೊಳಿಸಿದ ಜಿಲ್ಲಾಡಳಿತ

ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಕಿದ್ದ ಪೋಸ್ಟರ್‌ ಅನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್‌ 5ರಂದು ಹನುಮಮಾಲೆ ವಿಸರ್ಜನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈ ಪೋಸ್ಟರ್‌ ಹಾಕಲಾಗಿತ್ತು. ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಂಜನಾದ್ರಿ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಮಾಲಾಧಾರಿಗಳು ಆಗಮಿಸುತ್ತಾರೆ. ಹೀಗಾಗಿ ಅಂದು ಕಾರ್ಯಕ್ರಮದಲ್ಲಿ ಹಿಂದೂಯೇತರರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಫ್ಲೆಕ್ಸ್ ಹಾಕಿದ್ದರು.
ಅಂಜನಾದ್ರಿಯಲ್ಲಿ ಅನ್ಯ ಧರ್ಮದವರು ವ್ಯಾಪಾರ ವಹಿವಾಟು ಮಾಡಬಾರದು. ಹಿಂದುಗಳ ಕ್ಷೇತ್ರದಲ್ಲಿ ಹಿಂದುಗಳೇ ವ್ಯಾಪಾರ ಮಾಡಬೇಕು. ಅನ್ಯಧರ್ಮೀಯರ ವ್ಯಾಪಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಬಾರದು ಎಂದು ಕೋರಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಹ ಸಲ್ಲಿಸಿದ್ದರು. ಈಗ ಜಿಲ್ಲಾಡಳಿತ ಬ್ಯಾನರ್ ತೆರವು ಮಾಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement