ಐವರು ಜೆಎಂ ಭಯೋತ್ಪಾಕರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್‌

ನವದೆಹಲಿ: ದೇಶಾದ್ಯಂತ ಭಯೋತ್ಪಾದನಾ ಚಟುವಟಿಕೆಗಳಿಗೆ ಯುವಕರನ್ನು ನೇಮಿಸಿ ತರಬೇತಿ ನೀಡಿದ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಐವರು ಭಯೋತ್ಪಾದಕರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಆರೋಪಿಗಳಾದ ಸಜ್ಜದ್ ಅಹ್ಮದ್ ಖಾನ್, ಬಿಲಾಲ್ ಅಹ್ಮದ್ ಮಿರ್, ಮುಜಾಫರ್ ಅಹ್ಮದ್ ಭಟ್, ಇಶ್ಫಾಕ್ ಅಹ್ಮದ್ ಭಟ್ ಮತ್ತು ಮೆಹರಾಜ್-ಉದ್-ದಿನ್ ಚೋಪಾನ್ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ನಂತರ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ. ಈ ಪ್ರಕರಣದಲ್ಲಿ ತನ್ವೀರ್ ಅಹ್ಮದ್ ಗನಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನೂ ನ್ಯಾಯಾಧೀಶರು ವಿಧಿಸಿದ್ದಾರೆ.
ಎಲ್ಲಾ ಅಪರಾಧಿಗಳು ಭಾರತದ ವಿರುದ್ಧ ಯುದ್ಧ ಮಾಡಲು ಪರಸ್ಪರ ಪಿತೂರಿ ನಡೆಸುತ್ತಿದ್ದರು ಎಂದು ನ್ಯಾಯಾಧೀಶರು ಗಮನಿಸಿದರು.

ಅಪರಾಧಿಗಳು “ಜೆಎಂನ ಸದಸ್ಯರು ಮಾತ್ರವಲ್ಲದೆ ಅವರು ಶಸ್ತ್ರಾಸ್ತ್ರಗಳು / ಮದ್ದುಗುಂಡುಗಳು, ಲಾಜಿಸ್ಟಿಕ್ ಬೆಂಬಲಗಳು ಮತ್ತು ಸ್ಫೋಟಕಗಳನ್ನು ಒದಗಿಸುವ ಮೂಲಕ ಭಯೋತ್ಪಾದಕರು / ಜೆಎಂ ಸದಸ್ಯರಿಗೆ ಬೆಂಬಲ / ಆಶ್ರಯ ನೀಡುತ್ತಿದ್ದರು ಎಂದು ಕೋರ್ಟ್‌ ಹೇಳಿದೆ.
“ಆರೋಪಿಗಳು ಜಮ್ಮು ಮತ್ತು ಕಾಶ್ಮೀರದ ಸ್ಥಳೀಯರನ್ನು ಉಗ್ರರಾಗಲು ಪ್ರೇರೇಪಿಸುವಲ್ಲಿ ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಹಣವನ್ನು ವ್ಯವಸ್ಥೆಗೊಳಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಆದ್ದರಿಂದ ಅವರೆಲ್ಲರೂ 120B IPC ಮತ್ತು ಯು. ಯುಎ(ಪಿ) ಕಾಯಿದೆಯ / ಸೆ 18ರ ಅಡಿಯಲ್ಲಿ ಅಪರಾಧಕ್ಕಾಗಿ ಶಿಕ್ಷೆಗೆ ಅರ್ಹರಾಗಿದ್ದಾರೆ ನ್ಯಾಯಾಧೀಶರು ಹೇಳಿದರು.
ಎನ್‌ಐಎ (NIA) ಮಾರ್ಚ್ 2019 ರಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿತು. ಅಡಗುತಾಣಗಳ ವ್ಯವಸ್ಥೆ ಮತ್ತು ಭಯೋತ್ಪಾದಕರಿಗೆ ವ್ಯವಸ್ಥಾಪನಾ ಬೆಂಬಲವನ್ನು ನೀಡಲು ಮತ್ತು ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಪಾಕಿಸ್ತಾನ ಮೂಲದ ಜೆಎಂ ಕಾರ್ಯಕರ್ತರು ಅಪರಾಧಿಗಳಿಗೆ ತರಬೇತಿ ನೀಡಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement