ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ದಂಡ: ಮನನೊಂದ ವಿದ್ಯಾರ್ಥಿನಿ ಆತ್ಯಹತ್ಯೆ

ಉಡುಪಿ: ಪ್ರಥಮ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು, ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ತರಗತಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಶಿಕ್ಷಕರು ತನಗೆ ದಂಡ ವಿಧಿಸಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಹೆಬ್ರಿಯ ಎಸ್ ಆರ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ, ಪೆರ್ಡೂರು ನಿವಾಸಿ ಕಲ್ಪಂಡೆ ಸುರೇಶ ಮೆಂಡನ್ ಅವರ ಪುತ್ರಿ ತೃಪ್ತಿ (17) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. .ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಳೆಂದು ಕಾಲೇಜಿನಲ್ಲಿ ದಂಡ ಹಾಕಿದ್ದಕ್ಕೆ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದಿದ್ದ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ತೃಪ್ತಿ, ಕಾಲೇಜಿನ ರಿಯಾಯಿತಿ ಕೋಟಾದಡಿ, ಪ್ರಥಮ ಪಿಯುಸಿ ಕಾಲೇಜಿಗೆ ಪ್ರವೇಶ ಪಡೆದುಕೊಂಡಿದ್ದಳು. ಆದರೆ ಆಕೆ ಇತ್ತೀಚೆಗೆ ಕೆಲವು ಪರೀಕ್ಷೆಗಳಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದಳು. ಹಾಗಾಗಿ, ಆಕೆಯನ್ನು ಕಡಿಮೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್ ನೀಡಲು ಕಾಲೇಜಿನ ಆಡಳಿತ ಮಂಡಳಿ ಆರಂಭಿಸಿದ್ದ ವಿಶೇಷ ತರಗತಿಗೆ ಸೇರಿಕೊಂಡಿದ್ದಳು ಎನ್ನಲಾಗಿದೆ. ವಿಶೇಷ ತರಗತಿಯಲ್ಲಿ ಕಡಿಮೆ ಅಂಕ ಪಡೆದಿದ್ದಳು. ಹಾಗಾಗಿ, ಎಲ್ಲಾ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅವಳಿಗೆ ದಂಡ ಕಟ್ಟುವಂತೆ ಶಿಕ್ಷಕರು ಹೇಳಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ ಈ ಘಟನೆ ನಡೆದಿದೆ.
ಮಗಳ ತಂದೆ ಸುರೇಶ್ ಮೆಂಡನ್ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement