ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್‌ : 1.55 ಲಕ್ಷ ಹೊಸ ಪಡಿತರ ಕಾರ್ಡ್‌ ವಿತರಣೆಗೆ ಸರ್ಕಾರದ ಆದೇಶ

posted in: ರಾಜ್ಯ | 0

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸ ಆದ್ಯತಾ ಪಡಿತರ ಚೀಟಿ (BPL) ಕಾರ್ಡ್ ಹಂಚಿಕೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಹೊಸದಾಗಿ ಬಿಪಿಎಲ್ ಕಾರ್ಡ್ (BPL Card) ಹಂಚಿಕೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆದೇಶ ಹೊರಡಿಸಿದ್ದು, ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ಹೊಸದಾಗಿ 1,55,927 ಕಾರ್ಡ್ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ.
ಈ ವರ್ಷದ ಆಗಸ್ಟ್ ಅಂತ್ಯದ ವರೆಗೆ ಬಿಪಿಎಲ್ ಕಾರ್ಡ್‌ಗಾಗಿ ಸುಮಾರು 2,77,662 ಅರ್ಜಿಗಳು ಆನ್ ಲೈನ್ ಮೂಲಕ ಸಲ್ಲಿಕೆ ಆಗಿದ್ದವು. ಈಗ ಅವುಗಳ ಪರಿಶೀಲನೆ ಮಾಡಿ ಅದರಲ್ಲಿ ಅರ್ಹ 1,55,927 ಅರ್ಜಿಗಳಿಗೆ ಕಾರ್ಡ್ ನೀಡಲು ಸರ್ಕಾರ ಆದೇಶಿಸಿದೆ.
ಹೊಸ ಕಾರ್ಡ್ ನೀಡುವೆ ವೇಳೆ ಸರ್ಕಾರ ನಿಗದಿ ಮಾಡಿರುವ ಮಾನದಂಡಗಳು ಪಾಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಹಾಗೂ ಕಾರ್ಡ್ ಹಂಚಿಕೆ ವೇಳೆ 2017 ರಿಂದ 2021ರ ವರೆಗೆ ಅರ್ಜಿ ಸಲ್ಲಿಕೆಯಾದವರಿಗೆ ಮೊದಲ ಆದ್ಯತೆ ನೀಡಬೇಕು ಎಂದೂ ಸೂಚಿಸಿದೆ. ಅಲ್ಲದೆ ಕಾರ್ಡ್ ಹಂಚಿಕೆ ವೇಳೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದೆ.
.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.3 / 5. ಒಟ್ಟು ವೋಟುಗಳು 3

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement