ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ

ಮೈಸೂರು: ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಯಾರೋ ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಗರದ ಜಯಲಕ್ಷ್ಮಿಪುರಂ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ರಂಗಾಯಣದಿಂದ ಟಿಪ್ಪು ನಿಜಕನಸುಗಳು ಎಂಬ ನಾಟಕ ರಚಿಸಿ, ನಿರ್ದೇಶನ ಮಾಡಿ ಇದೀಗ ಪ್ರದರ್ಶನಗೊಳ್ಳುತ್ತಿದೆ. ಈ ಪ್ರದರ್ಶನ ಆರಂಭವಾದಂದಿನಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ದೂರು, ಇತ್ಯಾದಿ ಮಾಡುತ್ತಾ ಬಂದಿದ್ದಾರೆ. ನವೆಂಬರ್‌ 28ರಂದು ಶಿವಮೊಗ್ಗ ಜಿಲ್ಲೆಯ ವಿಳಾಸದಿಂದ ಪತ್ರವೊಂದು ಬಂದಿದ್ದು, ಈ ಪತ್ರದಲ್ಲೂ ಅವಾಚ್ಯ ಶಬ್ದಗಳ ನಿಂದನೆಯಿದ್ದು, ನಿನಗೀಗ ಸಾಯುವ, ಕೊಲೆ ಆಗುವ ಹಂತ ತಲುಪಿದ್ದೀಯಾ, ನಿನ್ನನ್ನು ನೀವು ನಂಬಿರುವ ದೇವರು ಸಹ ಕಾಪಾಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

1.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement