ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದೆ.
ನಾಲ್ಕು ಚಿರತೆಗಳು ಓಡಾಡುತ್ತಿರುವುದು ಸಿಸಿಟಿವಿಗಳಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಬೋನ್ ಇಡುವ ಮೂಲಕ ಈ ಚಿರತೆಗಳನ್ನು ಸೆರೆಗೆ ಹಿಡಿಯಲು ಈಗ ಅರಣ್ಯ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಖಾಸಗಿ ಕಾರ್ಖಾನೆ ಬಳಿ ಕೂಡ ಎರಡು ದಿನದಿಂದ ಚಿರತೆ ಓಡಾಟ ನಡೆಸಿರುವುದು ಪತ್ತೆಯಾಗಿದೆ. ಈ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ತಿಳಿಸಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ