ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಬೀಳ್ಕೊಡೆಗೆ ಕಾರ್ಯಕ್ರಮದ ವೇಳೆ ಕನ್ನಡ ಬಾವುಟ ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ.
ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಕೆಲ ಮರಾಠಿ ಭಾಷಿಕ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಂಜೆ 7.30ರ ಸುಮಾರಿಗೆ ಕಾಲೇಜಿನಲ್ಲಿ ಇಂಟರ್ ಕಾಲೇಜು ಫೆಸ್ಟ್ ನಡೆಯುತ್ತಿತ್ತು. ಈ ವೇಳೆ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಮೂವರು ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ನಂತರ ಶಿಕ್ಷಕರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈವರೆಗೆ ದೂರು ದಾಖಲಾಗಿಲ್ಲ. ವಿದ್ಯಾರ್ಥಿ ಕನ್ನಡ ಧ್ವಜ ಹಿಡಿದು ಡ್ಯಾನ್ಸ್ ಮಾಡುತ್ತಿದ್ದಾಗ ಕೆಲ ವಿದ್ಯಾರ್ಥಿಗಳು ಆತನ ಮೇಲೆ ಹಲ್ಲೆ ಮಾಡಿದ್ದು, ವಿಷಯ ಗೊತ್ತಾಗಿ ಶಿಕ್ಷಕರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ