ʼಹಿಂದೂಗಳ ವಿವಾಹ ವಯಸ್ಸು’ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್

ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್, ವಿವಾದಾತ್ಮಕ  ಮತ್ತು ಪ್ರತಿಗಾಮಿ ಹೇಳಿಕೆಯನ್ನು ನೀಡಿದ್ದಾರೆ.
ಹಿಂದೂಗಳು ತಮ್ಮ ಹೆಣ್ಣುಮಕ್ಕಳನ್ನು 18 ನೇ ವಯಸ್ಸಿನಲ್ಲಿ ಮದುವೆಯಾಗುವ ಸೂತ್ರವನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.
ಮುಸ್ಲಿಂ ಪುರುಷರು 20-22 ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ ಮತ್ತು ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ವಯಸ್ಸಿನ ನಂತರ 18 ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ, ಮತ್ತೊಂದೆಡೆ, ಅವರು (ಹಿಂದೂಗಳು) ಮದುವೆಗೆ ಮೊದಲು ಒಬ್ಬರು ಎರಡು ಅಥವಾ ಮೂರು ಸಂಬಂಧ ಇಟ್ಟುಕೊಳ್ಳುತ್ತಾರೆ, ಅವರು ಮಕ್ಕಳಿಗೆ ಜನ್ಮ ಕೊಡುವುದಿಲ್ಲ.ಮಜಾ ಮಾಡ್ತಾರೆ, ಹಣವನ್ನು ಉಳಿಸುತ್ತಾರೆ ಎಂದು” AIDUF ಮುಖ್ಯಸ್ಥರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

40 ವರ್ಷ ವಯಸ್ಸಿನ ನಂತರ ಅವರು ಪೋಷಕರ ಒತ್ತಡಕ್ಕೆ ಮದುವೆಯಾಗುತ್ತಾರೆ … ಹಾಗಾದರೆ, ಅವರು 40 ರ ನಂತರ ಮಕ್ಕಳನ್ನು ಹೆರುತ್ತಾರೆ ಎಂದು ಹೇಗೆ ನಿರೀಕ್ಷಿಸಬಹುದು? ನೀವು ಫಲವತ್ತಾದ ಭೂಮಿಯಲ್ಲಿ ಬಿತ್ತಿದರೆ ಆಗ ಮಾತ್ರ ನೀವು ಉತ್ತಮ ಬೆಳೆಗಳನ್ನು ಹೊಂದಬಹುದು. ಆಗ ಬೆಳವಣಿಗೆಯಾಗುತ್ತದೆ ಎಂದು ಹೇಳಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿಗಳ ಅವರ ‘ಲವ್ ಜಿಹಾದ್’ ಕಾಮೆಂಟ್ ಕುರಿತು ಪ್ರತಿಕ್ರಿಯಿಸಿದ ಅಜ್ಮಲ್, “ಅವರು (ಹಿಂದೂಗಳು) ಮುಸ್ಲಿಮರ ಸೂತ್ರವನ್ನು ಅನುಸರಿಸಬೇಕು ಮತ್ತು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಬೇಕು, 20-22 ನೇ ವಯಸ್ಸಿನಲ್ಲಿ ಮದುವೆ ಮಾಡಬೇಕು, 18-20 ವರ್ಷಕ್ಕೆ ಹುಡುಗಿಯರ ಮದುವೆ ಮಾಡಬೇಕು  ಎಂದು ಹೇಳಿದ್ದಾರೆ.

ಎಐಯುಡಿಎಫ್ ಮುಖ್ಯಸ್ಥ ಅಜ್ಮಲ್ ಇತ್ತೀಚೆಗೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ ಇತ್ತೀಚಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ “ಲವ್ ಜಿಹಾದ್” ಹೇಳಿಕೆ ಕುರಿತು ಪ್ರತಿಕ್ರಿಯಿಸುವಾಗ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶ್ರದ್ಧಾ ವಾಕರ್ ಪ್ರಕರಣದಲ್ಲಿ ‘ಲವ್ ಜಿಹಾದ್’ ಅಂಶವಿದೆ. ಭಾರತಕ್ಕೆ ಏಕರೂಪ ನಾಗರಿಕ ಸಂಹಿತೆ ಮತ್ತು ಲವ್ ಜಿಹಾದ್ ವಿರುದ್ಧ ಕಾನೂನು ಅಗತ್ಯವಿದೆ ಎಂದು ಶರ್ಮಾ ಕಳೆದ ತಿಂಗಳು ಹೇಳಿದ್ದರು.

ಪ್ರಮುಖ ಸುದ್ದಿ :-   ಐಪಿಎಲ್‌ (IPL)2024: ಹಾರ್ದಿಕ್ ಪಾಂಡ್ಯ- ಲಸಿತ್ ಮಾಲಿಂಗ ನಡುವೆ ಮುನಿಸು..? ಈ ವೀಡಿಯೊಗಳನ್ನು ನೋಡಿ

 

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement