ಬೆಳಗಾವಿ: ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ, ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ: ಕನ್ನಡ ಬಾವುಟ (Kannada Flag) ಹಾರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆದಿರುವ ಘಟನೆ ಬೆಳಗಾವಿಯ ಕಾಲೇಜೊಂದರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರ ಪೈಕಿ ಮೂರು ವಿದ್ಯಾರ್ಥಿಗಳು ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ. ಟಿಳಕವಾಡಿಯ ಕಾಲೇಜಿನಲ್ಲಿ ಸಂಜೆ 7:30ರ ಸುಮಾರಿಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್​ ಮಾಡಿದ್ದಾನೆ. ಇದನ್ನು ಕಂಡ ಕೆಲ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಥಳಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಘಟನೆಗೆ ಸಂಬಂಧಿಸಿದಂತೆ ಒಟ್ಟ ನಾಲ್ಕು ವಿದ್ಯಾರ್ಥಿಗಳನ್ನು ಬಂಧಿಸಿದ್ದು, ಅವರಲ್ಲಿ ಮೂವರು ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ.

3.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement