ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ, ಚಿರತೆ ದಾಳಿ ತಡೆಗೆ ವಿಶೇಷ ತಂಡ : ಸಿಎಂ ಬೊಮ್ಮಾಯಿ

ಬೆಂಗಳೂರು : ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ನೀಡಲಾಗುವುದು. ಮೊದಲು ಕಾಡುಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಆನೆ ಕಾಡಿದಾರ್ ಸುತ್ತಮುತ್ತ ಚಿರತೆಗಳೂ ಇವೆ. ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡಗಳು ಕಾರ್ಯಾಚರಣೆ ಮಾಡಲಿದೆ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement