ತತ್ಕಾಲ್ ಟಿಕೆಟ್‌ಗಾಗಿ ಸರದಿ ಬ್ರೇಕ್‌ ಮಾಡಿದ್ದನ್ನು ವಿರೋಧಿಸಿದವರ ಮೇಲೆ ರೈಲ್ವೇ ನಿಲ್ದಾಣದಲ್ಲಿ ಗುಂಡಿನ ದಾಳಿ

ಪಟ್ನಾ: ಭಾನುವಾರ ಪಾಟ್ನಾದ ಬಿಹ್ತಾ ರೈಲ್ವೇ ನಿಲ್ದಾಣದಲ್ಲಿ ತತ್ಕಾಲ್ ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ಬರದೆ ಮುನ್ನುಗ್ಗಿದ್ದನ್ನು ವಿರೋಧಿಸಿದ್ದಕ್ಕೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ನಂತರ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.
ಭಾನುವಾರದ ತತ್ಕಾಲ್ ಟಿಕೆಟ್‌ಗಾಗಿ ಬಿಹ್ತಾ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಭಾರಿ ಜನಸಂದಣಿ ಇತ್ತು. ಈ ನಡುವೆ ಕೌಂಟರ್‌ನಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ವಿಚಾರದಲ್ಲಿ ಜನರ ನಡುವೆ ಘರ್ಷಣೆ ನಡೆದು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.ಗುಂಡಿನ ದಾಳಿಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಬಿಹ್ತಾ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿ ಮುಖೇಶಕುಮಾರ ಪ್ರಕಾರ, ಗಾಯಗೊಂಡವರನ್ನು ಬಿಹ್ತಾ ನಿವಾಸಿ ಮುದ್ರಿಶ್ ಖಾನ್ (25) ಎಂದು ಗುರುತಿಸಲಾಗಿದೆ. ಘಟನೆಯ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಗಾಯಗೊಂಡ ಯುವಕನ ಹೇಳಿಕೆಯನ್ನು ತೆಗೆದುಕೊಳ್ಳಲಾಗಿದೆ. ಅಪರಿಚಿತ ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಅಧಿಕಾರಿ ಹೇಳಿದರು. ತನಿಖೆ ನಡೆಯುತ್ತಿದೆ.

3 / 5. 2

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement