ನೀರಿನ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು

ವಿಜಯಪುರ: ನೀರಿನ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವಿಗೀಡಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹುಣಿಶ್ಯಾಳ ಪಿ ಬಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಬಾಲಕರನ್ನು ರಮೇಶ (7), ಮಾಳಿಂಗರಾಯ (11) ಎಂದು ಗುರುತಿಸಲಾಗಿದೆ. ಈ ಇಬ್ಬರು ಬಾಲಕರು ಕೃಷಿ ಹೊಂಡದ ಹತ್ತಿರ ದನ ಮೇಯಿಸಲು ಹೋಗಿದ್ದ ವೇಳೆ, ನೀರು ಕುಡಿಯಲೆಂದು ಕೃಷಿ ಹೋಡಕ್ಕೆ ಹೋದಾಗ ಕಾಲು ಜಾರಿ ಬಿದ್ದು ಸಾವಿಗೀಡಾಗಿರಬಹುದು ಎಂದು ಶಂಕಿಸಲಾಗಿದೆ. ಬಾಲಕರಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ: ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್ ಮಾತ್ರ ಎಂದ ಖರ್ಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement