ಶಿವಮೊಗ್ಗ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ಅಂಗಸಂಸ್ಥೆಯಾಗಿರುವ ಸಿಎಫ್‌ಐ (CFI) ಸೇರುವಂತೆ ಶಿವಮೊಗ್ಗ ಜಿಲ್ಲೆಯ ವಿವಾದಾತ್ಮಕ ಗೋಡೆ ಬರಹ ಬರೆಯಲಾಗಿದೆ. ಪಟ್ಟಣದ 9ಕ್ಕೂ ಹೆಚ್ಚು ಕಡೆ ನೀಲಿ, ಕೆಂಪು ಬಣ್ಣದ ಸ್ಪ್ರೇಯಿಂದ ಬರೆಯಲಾಗಿದೆ ಎಂದು ವರದಿಯಾಗಿದೆ.
ನವೆಂಬರ್ 28ರಂದು ಪೊಲೀಸರು ಗಸ್ತು ತಿರುಗುವಾಗ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಸಿಎಫ್‌ಐ ಸೇರಿ ಎಂದು ಗೋಡೆ ಬರಹ ಬರೆದಿರುವುದು ಬೆಳಕಿಗೆ ಬಂದಿದೆ. ಪಟ್ಟಣದ 9ಕ್ಕೂ ಹೆಚ್ಚು ಕಡೆ ಬರೆಯಲಾಗಿದ್ದು, ಹಳೇ ಪೆಟ್ರೋಲ್ ಬಂಕ್ ಪಕ್ಕದಲ್ಲಿನ ಸಿಮೆಂಟ್ ಕಾಂಪೌಂಡ್, ಬೋವಿ ಕಾಲೋನಿಗೆ ಹೋಗುವ ವಿದ್ಯುತ್ ಕಂಬ, ದೊಡ್ಡ ಬ್ಯಾಣದಕೇರಿಗೆ ಹೋಗುವ ಕ್ರಾಸ್ ಬಳಿ ಗೋಡೆ ಮತ್ತು ವಿದ್ಯುತ್ ಕಂಬದ ಮೇಲೆ ಹೀಗೆ ಒಂಬತ್ತು ಕಡೆ ಗೋಡೆಗಳ ಮೇಲೆ ಈ ರೀತಿಯ ಗೋಡೆ ಬರಹಗಳನ್ನು ಬರೆಯಲಾಗಿದೆ.
ಈ ಬಗ್ಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಯಾರು ಬರೆದಿದ್ದಾರೆ ಎಂಬವರನ್ನ ಪತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ಹಾಗೂ ಅಂಗ ಸಂಸ್ಥೆಯಾಗಿರುವ ಸಿಎಫ್‌ಐ (CFI) ಸಂಘಟನೆಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ